ಮೈಸೂರು: ಇತ್ತೀಚೆಗಷ್ಟೇ ಶಿವಮೊಗ್ಗ ಜಿಲ್ಲೆಯ ಸಿಗಂಧೂರು ಸೇತುವೆ ಉದ್ಘಾಟನೆಯಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಇದನ್ನ ಉದ್ಘಾಟನೆ ಮಾಡಿದರು. ಈ ಉದ್ಘಾಟನಾ ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯ ಅವರನ್ನೇ ಕರೆದಿಲ್ಲ ಎಂದು ಕಾಂಗ್ರೆಸ್ ನವರು ಕೂಡ ಆರೋಪ ಮಾಡಿದರು. ಹಲವರು ಈ ವಿಚಾರಕ್ಕೆ ಸಂಬಂಧಿಸಿದಂತೆ ಆಕ್ರೋಶ ಹೊರ ಹಾಕಿದರು. ಆದರೆ ಆಗಿದ್ದೇನು..? ಸಿಎಂ ಸಿದ್ದರಾಮಯ್ಯ ಅವರಿಗೆ ನಿಜಕ್ಕೂ ಆಹ್ವಾನ ನೀಡಿರಲಿಲ್ವಾ ಎಂಬ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಅವರು ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಹೋಗಿ, ಸಿಗಂಧೂರು ಸೇತುವೆ ಉದ್ಘಾಟನಾ ಆಮಂತ್ರಣವನ್ನು ಕೊಟ್ಟು ಬಂದಿದ್ದಾರೆ. ಕೇಂದ್ರ ಸರ್ಕಾರದಿಂದಾನೂ ಆಂಮತ್ರಣ ಬಂದಿದೆ ಎಂದು ಸ್ಪಷ್ಟ ಪಡಿಸಿದ್ದಾರೆ.
ಹಾಗೇ, ಸಿದ್ದರಾಮಯ್ಯ ಅವರು ಮೈಸೂರಿಗೆ ಬರಬೇಕಾದರೂ ಹೆಲಿಕಾಪ್ಟರ್ ನಲ್ಲಿ ಬರ್ತಾರೆ. ಇಲ್ಲಿಂದ ಕೆ.ಆರ್.ಪೇಟೆ ಹಾಗೂ ಹೆಚ್ ಡಿ ಕೋಟೆಗೆ ಹೋಗಬೇಕಾದರೂ ಚಾಪರ್ ನಲ್ಲಿಯೇ ಹೋಗುತ್ತಾರೆ. ಅಂಥವರು ಮೊನ್ನೆ ಸಿಗಂಧೂರು ಚೌಡೇಶ್ವರಿ ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಲ್ಲಿಂದ ಇಂಡಿಗೆ ಹೋಗಬಹುದಿತ್ತು. ಸಿಗಂಧೂರು ಸೇತುವೆಯ ಕನಸು ಇಂದು ನಿನ್ನೆಯದ್ದಲ್ಲ. ಆ ಭಾಗದ ಜನರಿಗೆ ದಶಕದಿಂದಲೂ ಇದ್ದಂತ ಕನಸು ಅದು. ಈಗ ಈಡೇರಿದೆ. ಆ ಸಂಭ್ರಮದ ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೂಡ ಭಾಗಿಯಾಗಬಹುದಿತ್ತು. ಆದರೆ ಸಿದ್ದರಾಮಯ್ಯ ಅವರು ನಮಗೆ ಆಹ್ವಾನ ನೀಡಿಲ್ಲ, ಕಾರ್ಯಕ್ರಮವನ್ನು ಮುಂದೂಡಿ ಅಂತ ಪ್ರಧಾನಿ ಮೋದಿ ಹಾಗೂ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದರು ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











