Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರಿಗೆ ಕಾವೇರಿ ನೀರು ಕೊಟ್ಟವರು ದೇವೇಗೌಡರು : ಕುಮಾರಸ್ವಾಮಿ

Facebook
Twitter
Telegram
WhatsApp

ಬೆಂಗಳೂರು: ಕಾಂಗ್ರೆಸ್ ಪಕ್ಷ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಹಮ್ಮಿಕೊಂಡಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

‘ಕಾಂಗ್ರೆಸ್’ನ 5 ವರ್ಷದ ಸರಕಾರವೇ ಇತ್ತು. ʼಸಿದ್ದಹಸ್ತರೇʼ ಸಿಎಂ ಆಗಿದ್ದರು. ಆಗ ಕೇಂದ್ರದ ಮುಂದೆ ಪ್ರತಾಪ ತೋರಬಹುದಿತ್ತು. ಬರೀ ಮಾತಿನ ಉತ್ತರ ಪೌರುಷ. ಆಗ ಗಾಂಧೀಜಿ ಪ್ರತಿಮೆ ಮುಂದೆ ಉಪವಾಸ ಕೂತ ಮಣ್ಣಿನಮಗನ ಖದರಿಗೆ ಕೇಂದ್ರವೇ ನಡುಗಿತ್ತು. ದಿಲ್ಲಿಯಿಂದ ಮಂತ್ರಿಗಳು ಓಡಿಬಂದರು. ಅದೆಲ್ಲವನ್ನೂ ಕಾಂಗ್ರೆಸ್ ಮರೆತಿದೆಯಾ?.

ಹೌದು. ಜಾಣ ಮರೆವು ಕೂಡ ಒಂದು ರೋಗ. ಮಲತಾಯಿ ದೋರಣೆಯೇ ಮೈವೇತ್ತ ಕಾಂಗ್ರೆಸ್ ಈಗ ಪವಿತ್ರ ಗಂಗೆಯನ್ನೂ ಮತಕ್ಕೆ ಬಳಸುತ್ತಿದೆ. ಆಗ ಏನೂ ಮಾಡದ ʼಉತ್ತರಕುಮಾರ ಸಿದ್ದಸೂತ್ರಧಾರʼ, ಈಗೇನು ಮಾಡಲು ಸಾಧ್ಯ? ಆದರೆ; ರಾಜ್ಯದ ಹಿತದ ಪ್ರಶ್ನೆ ಬಂದಾಗ ಗೌಡರು ರಾಜಿಯಾದವರಲ್ಲ. ಅವರೊಬ್ಬರಿಂದಲೇ ಮೇಕೆದಾಟು ಯೋಜನೆ ಸಾಕಾರ ಸಾಧ್ಯ.

ಇಲ್ಲಿ 30 ವರ್ಷ ಆಳಿದವರು ಕಾವೇರಿ-ಕೃಷ್ಣಾ ವಿಚಾರದಲ್ಲಿ ಕೊಟ್ಟ ಕೊಡುಗೆ ಏನು? ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಎಂದು ಸ್ಲೋಗನ್ ಹೇಳಿಕೊಂಡು ಹೋಗಿ ಉತ್ತರ ಕರ್ನಾಟಕಕ್ಕೆ ಟೋಪಿ ಹಾಕಿದ್ದಾಗಿದೆ. ಮೇಕೆದಾಟು ವಿಚಾರದಲ್ಲಿಯೂ ಅದೇ ಆಗಲಿದೆ.

ಈಗ ಬೇಕಿರುವುದು ತಾಂತ್ರಿಕವಾಗಿ ಮೇಕೆದಾಟು ಯೋಜನೆಯನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕು. ಕೇಂದ್ರದ ಮೇಲೆ ಒತ್ತಡ ತಂದು ಯೋಜನೆಗೆ ಒಪ್ಪಿಗೆ ಪಡೆಯಲು ಹೋರಾಟ ನಡೆಸಬೇಕು. ಅದು ಬಿಟ್ಟು ಹೊಸ ಸ್ಲೋಗನ್ ಅಗತ್ಯ ಇಲ್ಲ.

ಪಾಪ ತೊಳೆಯುವ ತಾಯಿ ʼಲೋಕಪಾವನಿʼ ಈಗ ವೋಟಿನ ದಾಳವಾಗುತ್ತಿರುವುದು ನಾಡಿನ ದುರ್ದೈವ. ನೀರಿನ ಮುಂದೆ ʼಕಪಟ ನಾಟಕʼ ಮಾಡುವ ಸಿದ್ದಹಸ್ತ, ಡಿಸೈನ್ ಶೂರರಿಗೆ ಮುಂದೆ ಕಾದಿದೆ ಶಾಸ್ತಿ. ಭೂತಾಯಿ ಒಡಲಿನ ಮಣ್ಣು ಬಗೆದ, ಕಲ್ಲುಬಂಡೆಗಳನ್ನೇ ನುಂಗಿದ ʼರಕ್ಕಸ ರಾಜಕಾರಣʼದ ಕಾಕದೃಷ್ಟಿ ಈಗ ತಾಯಿ ಕಾವೇರಿ ಮೇಲೂ ಬಿದ್ದಿದೆ.

ದೇವೇಗೌಡರು ಕೃಷ್ಣೆ, ಕಾವೇರಿ ಕೊಳ್ಳದಲ್ಲಿ ಮಾಡಿದ ಸಾಧನೆಗಳನ್ನು ತಿಳಿಯಲು ಇತಿಹಾಸದ ಪುಟಗಳನ್ನು ತೆರೆದು ನೋಡಬೇಕು.

ಬೆಂಗಳೂರಿಗೆ ಕಾವೇರಿ ನೀರು ಕೊಟ್ಟವರು ದೇವೇಗೌಡರು. ಜೀವಜಲ ತಂದು ಬವಣೆ ನೀಗಿಸಿದವರು ಅವರೇ. ಈ ಭಗೀರಥನನ್ನೇ ಮರೆತ ಕಾಂಗ್ರೆಸ್ ‘ ಕೃತಘ್ನ ‘ ರಾಜಕಾರಣಕ್ಕೆ ಏನು ಹೇಳುವುದು? ಎಂದು ಸಾಲು ಸಾಲು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!