ಚಿತ್ರದುರ್ಗ. ಜುಲೈ. 17 : ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್ ತಂಗಡಗಿ ಅವರು ನಾಳೆ (ಜುಲೈ 18 ರಂದು) ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಗ್ಗೆ 9:30ಕ್ಕೆ ಬೆಂಗಳೂರಿನಿಂದ ರಸ್ತೆ ಮೂಲಕ ಪ್ರಯಾಣಿಸುವ ಅವರು, 11:30ಕ್ಕೆ ಚಿತ್ರದುರ್ಗ ನಗರಕ್ಕೆ ಆಗಮಿಸುವರು. ನಗರದ ಹೊರ ವಲಯದ ಭೋವಿ ಗುರುಪೀಠದಲ್ಲಿ ನಡೆಯಲಿರುವ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದೇಶ್ವರ ಸ್ವಾಮೀಜಿಯವರ 16ನೇ ಪಟ್ಟಾಭಿಷೇಕ ಮಹೋತ್ಸವ ಹಾಗೂ 27ನೇ ಲಾಂಛನ ದೀಕ್ಷಾ ಮಹೋತ್ಸವ, 40ನೇ ವಸಂತೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಕಾರ್ಯಕ್ರಮದ ನಂತರ ಮಧ್ಯಾನ್ಹ 3 : 30 ಗಂಟಗೆ ರಸ್ತೆ ಮೂಲಕ ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಪ್ರವಾಸ ಕಾರ್ಯಕ್ರಮದಲ್ಲಿ ತಿಳಿಸಲಾಗಿದೆ.


