Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜುಲೈ 22ರಂದು ಬೃಹತ್ ಉಚಿತ ಕಣ್ಣಿನ ತಪಾಸಣೆ, ಶಸ್ತ್ರಚಿಕಿತ್ಸೆ ಹಾಗೂ ಕನ್ನಡಕ ವಿತರಣಾ ಶಿಬಿರ

---Advertisement---

 

ಚಿತ್ರದುರ್ಗ. ಜುಲೈ. 18: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ಜಿಲ್ಲಾಸ್ಪತ್ರೆ, ನಗರಸಭೆ, ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಇದೇ ಜುಲೈ 22ರಂದು ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಚಿತ್ರದುರ್ಗ ನಗರದ ಭೀಮಸಮುದ್ರ ರಸ್ತೆಯ ಬಿ.ವಿ.ಕೆ.ಎಸ್. ಲೇ-ಔಟ್‍ನ ಬರಗೇರಮ್ಮ ಶಾಲಾ ಮುಂಭಾಗದಲ್ಲಿ “ಬೃಹತ್ ಉಚಿತ ಕಣ್ಣಿನ ತಪಾಸಣೆ, ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ವಿತರಣಾ ಶಿಬಿರ” ಹಮ್ಮಿಕೊಳ್ಳಲಾಗಿದೆ.

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಉದ್ಘಾಟನೆ ನೆರವೇರಿಸುವರು. ಚಲನಚಿತ್ರ ಕಲಾವಿದ ದೊಡ್ಡಣ್ಣ ಘನ ಉಪಸ್ಥಿತಿವಹಿಸುವರು. ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ ಅಧ್ಯಕ್ಷತೆ ವಹಿಸುವರು. ವಿಶೇಷ ಆಹ್ವಾನಿತರಾಗಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಸ್ಥಾಯಿ ಸಮಿತಿ ಅಧ್ಯಕ್ಷ ನಸ್ರುಲ್ಲಾ, 9ನೇ ವಾರ್ಡ್ ನಗರಸಭೆ ಸದಸ್ಯ ಲಕ್ಷಮ್ಮ, ಜಿಲ್ಲಾ ಗಾಣಿಗರ ಸಂಘದ ಅಧ್ಯಕ್ಷ ಡಿ.ಎಸ್.ಸುರೇಶ್ ಬಾಬು (ಸೈಟ್ ಬಾಬಣ್ಣ), ನಗರಸಭೆ ನಾಮನಿರ್ದೇಶನ ಸದಸ್ಯ ಬಿ.ವಿ.ಕಾರ್ತಿಕ್, ಮುಖಂಡ ಶ್ರೀರಾಮ್ ಭಾಗವಹಿಸುವರು.

ಗೌರವಾನ್ವಿತ ಅತಿಥಿಗಳಾಗಿ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ಡಿಹೆಚ್‍ಒ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ, ಜಿಲ್ಲಾ ಅಂಧತ್ವ ನಿವಾರಣಾಧಿಕಾರಿ ಡಾ.ಜಿ.ಓ.ನಾಗರಾಜ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಭಾಗಹಿಸುವರು. ಹೆಚ್ಚಿನ ಮಾಹಿತಿಗಾಗಿ ಶಾಸಕರ ಕಾರ್ಯಾಲಯ ದೂರವಾಣಿ ಸಂಖ್ಯೆ 7996768003, 9591515031, ಶಂಕರ ಕಣ್ಣಿನ ಆಸ್ಪತ್ರೆ-8069038900 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment