Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗ್ಯಾರಂಟಿ ಒದ್ದಾಟದ ನಡುವೆ ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಕೊಟ್ರು ಭರ್ಜರಿ ಗುಡ್ ನ್ಯೂಸ್..!

---Advertisement---

ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಗ್ಯಾರಂಟಿ ಯೋಜನೆಗಳು ಚಾಲ್ತಿಯಲ್ಲಿದ್ದಾವೆ. ಗ್ಯಾರಂಟಿ ಯೋಜನೆಗಳಿಗೆ ಖರ್ಚಾಗುತ್ತಿರುವುದು ಕಡಿಮೆ ಹಣವೇನು ಅಲ್ಲ. ಕೋಟಿ ಕೋಟಿ ಖರ್ಚಾಗುತ್ತಿದೆ. ಈ ನಡುವೆ ಗ್ಯಾರಂಟಿ ಯೋಜನೆಗಳಿಗೆ ಹಣ ಸರಿದೂಗಿಸುವ ಕಾರಣ ನೀಡಿ ಕ್ಷೇತ್ರಗಳಿಗೆ ಅನುದಾನ ನೀಡುತ್ತಿಲ್ಲ ಎಂದು ರಾಜ್ಯದ ಶಾಸಕರು ಸಿದ್ದರಾಮಯ್ಯ ವಿರುದ್ಧ ಗರಂ ಆಗಿದ್ದರು. ಈ ಸಮಸ್ಯೆಯನ್ನು ಬಗೆಹರಿಸುವುದಕ್ಕೆ ಹೈಕಮಾಂಡ್ ನಾಯಕರು ಕೂಡ ಮಧ್ಯ ಪ್ರವೇಶ ಮಾಡಿದ್ದರು. ರಣದೀಪ್ ಸುರ್ಜೇವಾಲ ಅವರು ಒನ್ ಟು ಒನ್ ಸಭೆ ನಡೆಸಿದರು. ಇದೀಗ ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಶಾಸಕರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಶಾಸಕರ ಕ್ಷೇತ್ರಗಳಿಗೆ 50 ಕೋಟಿ ಅನುದಾನವನ್ನು ರಿಲೀಸ್ ಮಾಡಲಾಗಿದೆ. ಶಾಸಕರ ಅಸಮಾಧಾನ ತಣಿಸಲು ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ಅಡಿ 50 ಕೋಟಿ ಅನುದಾನ ಬಿಡುಗಡರ ಮಾಡಲಾಗಿದೆ. ಈ ಮೂಲಕ ತಮ್ಮ ಪಕ್ಷದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಅವರು ಅನುದಾನ ನೀಡುವ ಕೊಡುಗೆ ನೀಡಿದ್ದಾರೆ.

ಲೋಕೋಪಯೋಗಿ ಇಲಾಖೆ ರಸ್ತೆ, ಸೇತುವೆ, ಕಾಮಗಾರಿ, ಗ್ರಾಮೀಣ ರಸ್ತೆ ಹಾಗೂ ನಗರ ಕಾಮಗಾರಿಗಳಿಗೆ 37.5 ಕೋಡಿ ಮೀಸಲಿಡಲಾಗುತ್ತಿದೆ. ಜೊತೆಗೆ 12.5 ಕೋಟಿ ಶಾಸಕರ ವಿವೇಚನಾಧಿಕಾರಕ್ಕೆ ಮೀಸಲಿಡಲು ನಿರ್ಧರಿಸಲಾಗಿದೆ. ಇನ್ನೂ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜುಲೈ 30-31ರಂದು ಎರಡು ದಿನ ಶಾಸಕರೊಂದಿಗೆ ಮ್ಯಾರಥಾನ್ ಮೀಟಿಂಗ್ ಮಾಡಲಿದ್ದಾರೆ. ಶಾಸಕರು ಕ್ಷೇತ್ರದ ಬೇಡಿಕೆಗಳ ಪಟ್ಟಿ ಸಮೇತ ವಿವರಗಳನ್ನು ನೀಡುವಂತೆ ಸೂಚನೆ ನೀಡಲಾಗಿದೆ. ಒಟ್ಟಿನಲ್ಲಿ ಗ್ಯಾರಂಟಿಗೋಸ್ಕರ ಅನುದಾನವಿಲ್ಲ ಎಂದು ಹೇಳುತ್ತಿದ್ದವರಿಗೆ ಸಿದ್ದರಾಮಯ್ಯ ಅವರು ಈ ಮೂಲಕ ತಿರುಗೇಟು ಕೊಟ್ಟಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment