Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮನೆ ಮನೆಗೆ ಪೊಲೀಸ್ : ಏನಿದು ಸರ್ಕಾರದ ಹೊಸ ಯೋಜನೆ..?

---Advertisement---

ಬೆಂಗಳೂರು: ಮನೆ ಮನೆಗೆ ಪೊಲೀಸ್ ಎಂಬ ಯೋಜನೆಗೆ ಇಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಚಾಲನೆ ನೀಡಿದ್ದಾರೆ. ಈ ಯೋಜನೆ ಏನು..? ಹೇಗೆ ಬಳಕೆಯಾಗುತ್ತೆ ಎಂಬುದೆಲ್ಲವನ್ನು ಜಿ ಪರಮೇಶ್ವರ್ ಅವರೇ ತಿಳಿಸಿದ್ದಾರೆ. ಯೋಜನೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಪರಮೇಶ್ವರ್ ಅವರು, ಮನೆ ಮನೆಗೆ ಪೊಲೀಸರು ಭೇಟಿ ನೀಡುವ ಯೋಜನೆ ದೇಶದಲ್ಲಿ ಇದೆ ಮೊದಲು. ಈ ವಿನ್ಯಾಸದ ಕಾರ್ಯಕ್ರಮದ ಮೂಲಕ ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ.

ಇದರಿಂದಾಗಿ ಕಾನೂನು ಸಂಬಂಧಿತ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಲು ಮತ್ತು ಪೊಲೀಸ್ ಇಲಾಖೆಗೆ ಅಗತ್ಯವಿರುವ ಮಾಹಿತಿಯನ್ನು ಸಂಗ್ರಹಿಸಲು ಸಹಾಯವಾಗಲಿದೆ. ಪೊಲೀಸರು ಜನಸ್ನೇಹಿ ಆಗಬೇಕು ಎಂದು ಈ ಕಾರ್ಯಕ್ರಮವನ್ನು ಶುರು ಮಾಡಿದ್ದೇವೆ. ನಾವೇ ಜನರ ಮನೆ ಬಾಗಿಲಿಗೆ ಹೋಗಿ ಕಷ್ಟ ಕೇಳೋಣ ಅಂತ ತೀರ್ಮಾನ ಮಾಡಿದ್ದೇವೆ. ಪ್ರತಿ ಠಾಣೆಯ ಲಿಮಿಟ್ಸ್ ನಲ್ಲಿ ಈ ಕೆಲಸ ಆಗಬೇಕು.

ಬೀಟ್ ಪೊಲೀಸರು ಈ ಕೆಲಸವನ್ನು ಮಾಡಬೇಕು ಯಾರ ಮನೆಯಲ್ಲಿ ಯಾರಿದ್ದಾರೆ, ಹೊಸದಾಗಿ ಯಾರು ಬಂದಿದ್ದಾರೆ, ಬಾಡಿಗೆಗೆ ಇದ್ದಾರೆಯೇ, ಅವರು ಏನು ಕೆಲಸ ಮಾಡ್ತಾರೆ ಎಂಬ ಮಾಹಿತಿಯನ್ನು ಕಲೆ ಹಾಕಿದ್ರೆ ಇಡೀ ಬೆಂಗಳೂರು ಡೇಟಾ ಬ್ಯಾಂಕ್ ನಮ್ಮ ಬಳಿ ಇರುತ್ತದೆ. ಪೊಲೀಸರು ಬಂದಾಗ ಜನರ ಕಷ್ಟಸುಖ ಹೇಳಬಹುದು. ಏನಾದ್ರೂ ತೊಂದರೆ ಆಗ್ತಾ ಇದ್ದರೆ ಹೇಳಬಹುದು. ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರೆ ಮಾಹಿತಿ ನೀಡಬಹುದು. ಜನಸ್ನೇಹಿ ಪೊಲೀಸರ ಜೊತೆಗೆ ಶಾಂತಿ ಕಾಪಾಡಲು ಈ ಕಾರ್ಯಕ್ರಮ ಸಹಾಯವಾಗುತ್ತದೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment