Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಕ್ಲು ಶಿವನ ಕೊ* ಕೇಸ್ : ಬಿಜೆಪಿ ಶಾಸಕನಿಗೆ ಬಂಧನದ ಭೀತಿ..!

---Advertisement---

 

ಬೆಂಗಳೂರು: ಇತ್ತೀಚೆಗೆ ರೌಡಿಶೀಟರ್ ಬಿಕ್ಲು ಶಿವನ ಕೊ*ಯಾಗಿತ್ತು. ಈ ಕೇಸಲ್ಲಿ ಶಾಸಕ ಭೈರತಿ ಬಸವರಾಜ್ ಹೆಸರು ಕೂಡ ಕೇಳಿ ಬಂದಿತ್ತು. ಇದೀಗ ಕೋರ್ಟ್ ನಿಂದ ಸೂಚನೆ ಬಂದಿದ್ದು, ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಭೈರತಿ ಬಸವರಾಜ್ ಅವರ ವಿಚಾರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆ, ರಾಜ್ಯದ ಹಿರಿಯ ಪೊಲೀಸರು ಅಲರ್ಟ್ ಆಗಿದ್ದಾರೆ. ತನಿಖಾ ತಂಡದ ಜೊತೆಗೆ ರಾತ್ರಿಯೇ ಸಭೆ ನಡೆಸಿದೆ. ಹೈಕೋರ್ಟ್ ಕೂಡ ಬಂಧನದ ವಿಚಾರವಾಗಿ ಯಾವುದೇ ರೀತಿಯ ರಕ್ಷಣೆ ನೀಡುವ ಮುಲಾಜಿಗೆ ಹೋಗಿಲ್ಲ. ಹೀಗಾಗಿ ಶಾಸಕ ಭೈರತಿ ಬಸವರಾಜ್ ಅವರಿಗೆ ಬಂಧನದ ಭೀತಿ ಶುರುವಾಗಿದೆ.

ರೌಡಿಶೀಟರ್ ಬಿಕ್ಲು ಶಿವನ ಹತ್ಯೆ ಕೇಸ್ ಶಾಸಕ ಭೈರತಿ ಬಸವರಾಜ್ ಅವರಿಗೆ ಸಂಕಷ್ಟ ತಂದೊಡ್ಡಿದೆ. ಇದರ ನಡುವೆ ಅವರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹಿನ್ನಡೆಯಾಗಿದೆ. ಈ ಸಂಬಂಧ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠ ಬಂಧನದಿಂದ ರಕ್ಷಣೆ ನೀಡಲು‌ ನಿರಾಕರಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಇಂದು ಬೆಳಗ್ಗೆ 11.30ಕ್ಕೆ ಪೊಲೀಸರ ಮುಂದೆ ಹಾಜರಾಗುವುದಕ್ಕೆ ಸೂಚನೆ ನೀಡಲಾಗಿದೆ. ಹೀಗಾಗಿ ಶಾಸಕ ಭೈರತಿ ಬಸವರಾಜ್ ಅವರು ಕೆಜಿಹಳ್ಳಿ ಎಸಿಪಿ ಪ್ರಕಾಶ್ ರಾಥೋಡ್ ಮುಂದೆ ಹಾಜರಾಗುವ ಎಲ್ಲಾ ಸಾಧ್ಯತೆಗಳು ಇದೆ. ತನಿಖಾಧಿಕಾರಿಗಳು ಕೂಡ ಎಲ್ಲಾ ರೀತಿಯ ತಯಾರಿಯನ್ನ ಮಾಡಿಕೊಂಡಿದ್ದಾರೆ. ಪುಲಕೇಶಿನಗರ ಠಾಣೆಗೆ ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಡಿಸಿಪಿ ದೇವರಾಜ್, ಎಸಿಪಿ ಗೀತಾ ಠಾಣೆಗೆ ಹೋಗಿ ಎಲ್ಲಾ ರೀತಿಯ ಪರಿಶೀಲನೆ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment