ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಕೆಟಿನ್ ರಿಲೀಸ್ ಮಾಡಿದ್ದು, ಅದರಲ್ಲಿ ಕಳೆದ 24 ಗಂಟೆಯಲ್ಲಿ 566 ಜನಕ್ಕೆ ಕೊರೊನಾ ಸೋಂಕು ತಗುಲಿದೆ.
ಅದರಲ್ಲಿ 21932 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 86794 RTPCR ಟೆಸ್ಟ್ ಸೇರಿದಂತೆ ಒಟ್ಟು 108726 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 566 ಜನಕ್ಕೆ ಸೋಂಕು ದೃಢಪಟ್ಟಿದೆ. 400 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಉಳಿದಂತೆ ಕೊರೊನಾದಿಂದ ಗುಣಮುಖರಾಗಿ 245 ಮಂದಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಕಳೆದ 24 ಗಂಟೆಯಲ್ಲಿ ಸುಮಾರು 6 ಜನ ಕೊರೊನಾ ಜಯಿಸಲಾಗದೆ ಸಾವನ್ನಪ್ಪಿದ್ದಾರೆ.