Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಧರ್ಮಸ್ಥಳದಲ್ಲಿ ಮಹಿಳೆಯರು, ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ : SITಗೆ ವಹಿಸಿದ ರಾಜ್ಯ ಸರ್ಕಾರ..!

---Advertisement---

ಬೆಂಗಳೂರು : ಬಹಳ ಸಂಚಲನ ಮೂಡಿಸಿದ್ದ ಧರ್ಮಸ್ಥಳದಲ್ಲಿ ಮಹಿಳೆಯರು ಮತ್ತು ಯುವತಿಯರ ನಾಪತ್ತೆ ಕೇಸಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನ ಇಟ್ಟಿದೆ.‌ ಈ ಕೇಸನ್ನು ಕಡೆಗೂ ಎಸ್ಐಟಿಗೆ ವಹಿಸಿದೆ‌. ಮಹಿಳೆಯರು ಹಾಗೂ ವಿದ್ಯಾರ್ಥಿನಿಯರ ನಾಪತ್ತೆ ಕೇಸಿಗೆ ಸಂಬಂಧಿಸಿದಂತೆ‌ ತನಿಖೆ ನಡೆಸಲು ಮೊಹಂತಿ ನೇತೃತ್ವದ ಎಸ್ಐಟಿ ತಂಡವನ್ನು ರಚನೆ ಮಾಡಿದೆ.

ಈ ಎಸ್ಐಟಿ ತಂಡದಲ್ಲಿ ಸದಸ್ಯರಾಗಿ ಅನುಚೇತ್, ಸೌಮ್ಯ ಲತಾ, ಜಿತೇಂದ್ರ ಕುಮಾರ್ ಕೂಡ ಇದ್ದಾರೆ. ಈ ವಿಶೇಷ ತನಿಖಾ ತಂಡವು ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರು, ವಿದ್ಯಾರ್ಥಿನಿಯರು, ಹಲ್ಲೆ, ಅತ್ಯಾ*ಚಾರ, ಅಸ್ವಾಭಾವಿಕ ಸಾ*ವಿನ ಬಗ್ಗೆ ತನಿಖೆ ನಡೆಸಲಿದೆ.

ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಡಾ.ಪ್ರವಣ ಮೋಹಂತಿ ಎಸ್ಐಟಿಗೆ ಮುಖ್ಯಸ್ಥರಾಗಿರುತ್ತಾರೆ. ಇನ್ನು ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರೀಕ್ಷಕ ಎಂ.ಎನ್​.ಅನುಚೇತ್, ಸಿಎಆರ್ ಕೇಂದ್ರಸ್ಥಾನದ ಉಪ ಪೊಲೀಸ್ ಆಯುಕ್ತೆ ಸೌಮ್ಯಲತ, ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ್ ಎಸ್​ಐಟಿ ತಂಡದ ಸದಸ್ಯರಾಗಿರುತ್ತಾರೆ.

ಸೋಷಿಯಲ್ ಮೀಡಿಯಾದಲ್ಲಿ ಈ ಸುದ್ದಿ ಸಂಬಂಧ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದವು. ಕೊಲೆ ಮಾಡಿ, ಹೂತು ಹಾಕಿರುವ ವ್ಯಕ್ತಿಯೇ ಆ ಬಗ್ಗೆ ಸತ್ಯ ಒಪ್ಪಿಕೊಳ್ಳಲು ಬಂದಿದ್ದಾನೆ. ಹೀಗಿರುವಾಗ ನಿಷ್ಪಕ್ಷಪಾತವಾಗಿ ತನಿಖೆಯಾಗಬೇಕು ಎಂದು ಮನವಿ ಮಾಡಲಾಗಿತ್ತು. ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಸರ್ಕಾರ ಹೊಸದೊಂದು ನಿರ್ಧಾರವನ್ನ ಕೈಗೊಂಡಿದ್ದಾರೆ. ಎಸ್ಐಟಿ ತನಿಖೆಗೆ ಒಪ್ಪಿಸಿದ್ದಾರೆ. ಇನ್ಮುಂದೆ ತನಿಖೆಯೂ ನಡೆಯಲಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment