ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ. 21 : ನಿವೃತ್ತ ನೌಕರರಿಗೆ ಮತ್ತು ಕುಟುಂಬದವರಿಗೆ ಪಿಂಚಣಿ ಸೌಲಭ್ಯಗಳನ್ನು ಕಡಿತಗೊಳಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತೀರ್ಮಾನ ತೆಗೆದುಕೊಂಡಿರುವುದನ್ನು ವಿರೋಧಿಸಿ ತಾಲ್ಲೂಕು ನಿವೃತ್ತ ನೌಕರರ ಸಂಘದಿಂದ ತಹಶೀಲ್ದಾರ್ ಮೂಲಕ ಸೋಮವಾರ ಪ್ರಧಾನಿಗೆ ಮನವಿ ರವಾನಿಸಲಾಯಿತು.
ಕೇಂದ್ರ ಹಣಕಾಸು ಮಂತ್ರಿ ನಿರ್ಮಲ ಸೀತಾರಾಮನ್‍ರವರು ದಿನಾಂಕ : 25-3-2025 ರಂದು ಲೋಕಸಭೆಯಲ್ಲಿ ಆರ್ಥಿಕ ಬಿಲ್ಲನ್ನು ಮಂಡಿಸುವ ಸಂದರ್ಭದಲ್ಲಿ ಸರ್ಕಾರಕ್ಕೆ ಎಂಟನೆ ವೇತನ ಆಯೋಗವು ವರದಿ ಸಲ್ಲಿಸಿದ ಮೇಲೆ 1-4-2026 ರ ನಂತರ ನಿವೃತ್ತಿ ಹೊಂದುವ ಸರ್ಕಾರಿ ನೌಕರರಿಗೆ ಪಿಂಚಣಿ ಮತ್ತು ಕುಟುಂಬ ಪಿಂಚಣಿಯನ್ನು ಪರಿಷ್ಕರಿಸಲಾಗುವುದು ಆದರೆ 1-4-2025 ರ ಹಿಂದೆ ನಿವೃತ್ತಿಯಾಗಿರುವವರ ಪಿಂಚಣಿಯನ್ನು ಪರಿಷ್ಕರಿಸುವುದು ಕಷ್ಟವಾಗಿರುವುದರಿಂದ ಮುಂದಿನ ತುಟ್ಟಿ ಭತ್ಯೆಯನ್ನು ಮಂಜೂರು ಮಾಡುವುದು ಅಸಾಧ್ಯ ಎಂಬ ನಿರ್ಧಾರ ತೆಗೆದುಕೊಂಡಿರುವುದನ್ನು ನಾವುಗಳು ಖಂಡಿಸುತ್ತೇವೆಂದು ಮನವಿ ಸಲ್ಲಿಸಿದರು.
ತಾಲ್ಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ.ಕೆ.ಹನುಮಂತಪ್ಪ, ಉಪಾಧ್ಯಕ್ಷ ಪಿ.ಎಸ್.ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಪರಮೇಶ್ವರಪ್ಪ ಹೆಚ್. ಸಹ ಕಾರ್ಯದರ್ಶಿ ತಿಪ್ಪೇಸ್ವಾಮಿ, ಸಂಘಟನಾ ಕಾರ್ಯದರ್ಶಿ ನೀಲಕಂಠಾಚಾರ್, ನಿರ್ದೇಶಕ ಪಿ.ನಾಗರಾಜ್ ಸೇರಿದಂತೆ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
