Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವೃತ್ತಿಪರ ತರಬೇತಿ ಹಾಗೂ ವಿದ್ಯಾರ್ಥಿ ನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

Post-matric scholarships, incentive grants, and hostel admission for Scheduled Caste students: Online applications invited
---Advertisement---

 

ಚಿತ್ರದುರ್ಗ. ಜುಲೈ23: ಪ್ರಸಕ್ತ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಒದಗಿಸುವ ನಿಟ್ಟಿನಲ್ಲಿ ಹೋಟೆಲ್ ಮ್ಯಾನೇಜ್‍ಮೆಂಟ್ ವೃತ್ತಿಪರ ತರಬೇತಿಯನ್ನು ಬೆಂಗಳೂರಿನ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್‍ನಲ್ಲಿ ನೀಡಲಾಗಿದ್ದು, ಈ ಸಂಬಂಧ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 2  ಅರ್ಜಿ ಸಲ್ಲಿಸಲು ಕೊನೆಯ ದಿನ.

ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್‍ನಲ್ಲಿ https://sevasindhu.karnataka.gov.in  ನಲ್ಲಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ರೇಖಾ ತಿಳಿಸಿದ್ದಾರೆ.

ವಿದ್ಯಾರ್ಥಿ ನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ. ಜುಲೈ23: ಪ್ರಸಕ್ತ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪಿಯುಸಿ ಹಾಗೂ ಸಮನಾಂತರ ಕೋರ್ಸ್ ಮತ್ತು ಪದವಿಮಟ್ಟದ ಕೋರ್ಸ್‍ಗಳ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 02 ಅರ್ಜಿ ಸಲ್ಲಿಸಲು ಕೊನೆಯ ದಿನ.

ಅರ್ಜಿಗಳನ್ನು ಜಾಲತಾಣದ ವಿಳಾಸ https://shp.karnataka.gov.in ನಲ್ಲಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ರೇಖಾ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment