Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಯೋಗ ಶಿಕ್ಷಕಿ ಹೇಮಾವತಿಗೆ ಸನ್ಮಾನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 24 : ಮಹಿಳಾ ಪತಂಜಲಿ ಯೋಗ ಕೇಂದ್ರದ ಜಿಲ್ಲಾ ಪ್ರಭಾರಿ ಹಾಗೂ ಯೋಗ ಶಿಕ್ಷಕಿ ಹೇಮಾವತಿಯವರನ್ನು ಕೋಟೆ ಯೋಗ ಸಮಿತಿ ವತಿಯಿಂದ ಮಿನರ್ವ ಕಾನ್ವೆಂಟ್‍ನಲ್ಲಿ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಯೋಗ ಶಿಕ್ಷಕಿ ಹೇಮಾವತಿ ಯೋಗ, ಧ್ಯಾನ, ಪ್ರಾಣಾಯಾಮದಿಂದ ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಂತರಾಗಿರಬಹುದು.
ಮಹಿಳೆಯರನ್ನು ಕಾಡುವ ಅನೇಕ ಸಮಸ್ಯೆಗಳನ್ನು ಯೋಗದಿಂದ ದೂರ ಮಾಡಿಕೊಳ್ಳಬಹುದು. ಆಧುನಿಕ ಯುಗದಲ್ಲಿ ಎಲ್ಲರೂ ಸಕ್ಕರೆ ಕಾಯಿಲೆ ಹಾಗೂ ರಕ್ತದೊತ್ತಡದಿಂದ ಬಳಲುವುದು ಸಹಜ. ಯೋಗಾಭ್ಯಾಸದಿಂದ ಮನಸ್ಸು ಪ್ರಶಾಂತವಾಗಿರುವುದಲ್ಲದೆ ಆಯಾಸವಾಗುವುದಿಲ್ಲ. ಲವಲವಿಕೆಯಿಂದಿರಲು ಯೋಗ ನೆರವಾಗಲಿದೆ ಎಂದು ತಿಳಿಸಿದರು.

ಕೋಟೆ ವಾಯುವಿಹಾರಿಗಳ ಸಂಘದ ಅಧ್ಯಕ್ಷ ಆರ್.ಸತ್ಯಣ್ಣ ಮಾತನಾಡಿ ಸರ್ವ ರೋಗಗಳ ನಿವಾರಣೆಗೆ ಯೋಗ ರಾಮ ಬಾಣವಿದ್ದಂತೆ. ಎಲ್ಲಾ ವಯಸ್ಸಿನವರು ಯೋಗದಲ್ಲಿ ತೊಡಗಿಕೊಳ್ಳುವುದರಿಂದ ನಾನಾ ರೀತಿಯ ಕಾಯಿಲೆಗಳನ್ನು ಗುಣಪಡಿಸಿಕೊಳ್ಳಬಹುದು. ಋಷಿಮುನಿಗಳ ಕಾಲದಿಂದಲೂ ಯೋಗಕ್ಕೆ ತನ್ನದೆ ಆದ ಮಹತ್ವವಿದೆ. ಯೋಗ ಮಾಡುವವರು ನಿರೋಗಿಗಳಾಗಿರುತ್ತಾರೆಂದರು. ಮಿನರ್ವ ಕಾನ್ವೆಂಟ್‍ನ ಕಾರ್ಯದರ್ಶಿ ಶಾರದ, ರಾಘವೇಂದ್ರ ವಿದ್ಯಾಸಂಸ್ಥೆಯ ಪ್ರಾಚಾರ್ಯರಾದ ಬಸವರಾಜ್, ಕೂಬಾನಾಯ್ಕ, ಶಿವಮ್ಮ, ಗೌತಮಿ, ಸ್ವಾತಿ, ಪೂಜಾ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...