Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ರಾಜ್ಯದಲ್ಲಿ ಜೋರು ಮಳೆಯ ಸೂಚನೆ : ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ..!

---Advertisement---

ಬೆಂಗಳೂರು: ರಾಜ್ಯದೆಲ್ಲೆಡೆ ಮಳೆಯ ಅಬ್ಬರ ಜೋರಾಗಿದೆ. ಬೆಳಗ್ಗೆಯಿಂದ ಹಲವೆಡೆ ಸುರಿಯುತ್ತಿರುವ ಮಳೆರಾಯ, ಆಗಾಗ ಗ್ಯಾಪ್ ಕೊಟ್ಟು ಮತ್ತೆ ಸುರಿಯುತ್ತಿದ್ದಾನೆ. ಇದರಿಂದ ಹೊರಗೆ ಹೋಗುವವರಿಗಿಂತು ಕಿರಿಕಿರಿಯಂತೆ ಆಗಿದೆ. ಆದರೆ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಈಗಷ್ಟೇ ಉಳುಮೆ ಮಾಡಿ, ಬೀಜ ಬಿತ್ತನೆ ಮಾಡಿರೋ ರೈತರಿಗೆ ಪೈರು ಮೊಳಕೆಯೊಡೆಯುವ ಸಮಯ ಇದು. ಹೀಗಾಗಿ ರೈತರು ಬರಬೇಕಾದ ಸಮಯಕ್ಕೆ ವರುಣಾರಾಯ ಬಂದರೆ ಸಾಕಪ್ಪ ಎನ್ನುತ್ತಿದ್ದಾರೆ.

ಇನ್ನು ಮಳೆ ಎಲ್ಲೆಲ್ಲಿ ಇರಲಿದೆ..? ಎಷ್ಟು ದಿನ ಇರಲಿದೆ..? ಎಂಬೆಲ್ಲಾ ಮಾಹಿತಿಯನ್ನ ಹವಮಾನ ಇಲಾಖೆ ಸೂಚನೆ ನೀಡಿದೆ. ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆಯನ್ನು ನೀಡಿದೆ. ಹಾಗೇ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಅನ್ನು ಘೋಷಣೆ ಮಾಡಿದೆ. ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಉಳಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರು ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಬೆಂಗಳೂರಲ್ಲಿ ಇಡೀ ದಿನ ಮೋಡ ಕವಿದ ವಾತಾವರಣ ಮುಂದುವರೆದಿದೆ. ಕರಾವಳಿ ಜಿಲ್ಲೆಗಳು ಮಾತ್ರವಲ್ಲ ಮಲೆನಾಡು ಭಾಗಗಳಲ್ಲೂ ಭಾರೀ ಮಳೆ ಸುರಿಯುತ್ತಿದೆ. ಇದರಿಂದ ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸುವ ಸಾಧ್ಯತೆಯು ಇದೆ. ಜೋರಾದ ಮಳೆಯ ಮುನ್ಸೂಚನೆ ಹಿನ್ನೆಲೆ ಮಂಗಳೂರು, ಉಡುಪಿ ಭಾಗದಲ್ಲಿ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...