Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಅಧ್ಯಕ್ಷರಾಗಿ ಉದ್ಯಮಿ ಶರಣ್ ಕುಮಾರ್ ಆಯ್ಕೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಜು. 25 : ಚಿತ್ರದುರ್ಗದಲ್ಲಿ ನಡೆಯಲಿರುವ ಈ ಬಾರಿಯ ಹಿಂದೂ ಮಹಾಗಣಪತಿ ಹಬ್ಬ 18 ನೇ ವರ್ಷಕ್ಕೆ ಕಾಲಿಡುತ್ತಿದೆ. ಆಗಸ್ಟ್-27 ರಂದು ಗಣೇಶ ಪ್ರತಿಷ್ಠಾಪನೆಯಾಗಿ 18 ದಿವಸಗಳ ಕಾಲ ಗಣೇಶೋತ್ಸವ ನಡೆಯುತ್ತಿದ್ದು, ಸೆಪ್ಟಂಬರ್-13 ರಂದು ಶೋಭಾಯಾತ್ರೆ ನಡೆಯಲಿದ್ದು, ಈ ಬಾರಿ ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಅಧ್ಯಕ್ಷರಾಗಿ ಹೋಟೆಲ್ ಉದ್ಯಮಿಯಾದ ಶರಣ್ ಕುಮಾರ್ ಆಯ್ಕೆ ಆಗಿದ್ದಾರೆ. ವಿಶ್ವ ಹಿಂದೂ ಪರಿಷತ್ ಇಡೀ ಗಣೇಶೋತ್ಸವದ ಜವಾಬ್ದಾರಿ ಹೊತ್ತಿದೆ ಎಂದು ವಿಶ್ವ ಹಿಂದೂ ಪರಿಷತ್‍ನ ಪ್ರಾಂತ್ಯ ಕಾರ್ಯದರ್ಶಿಯಾದ ಶರಣ ಪಂಪವಲ್ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 1863 ರಲ್ಲಿ ಬಾಲಗಂಗಾಧರನಾಥ ತಿಲಕ್ ರವರು ಮೊದಲು ಗಣೇಶ ಉತ್ಸವವನ್ನು ಪ್ರಾರಂಭ ಮಾಡಿದರು. ಅಂದಿನಿಂದ ಗಣೇಶ ಹಬ್ಬವನ್ನು ದೇಶದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.ಇಂದು ಇಡೀ ದೇಶದಲ್ಲಿ ಪ್ರತಿ ಹಳ್ಳಿಯಲ್ಲೂ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದೆ.. ಸಮಾಜದ ಎಲ್ಲಾ ವರ್ಗದವರನ್ನು  ಒಂದುಗೂಡಿಸಿ ರಾಷ್ಟ್ರೀಯ ಭಾವನೆ ಮೂಡಿಸುವ ಕೆಲಸ ಆಗುತ್ತಿದೆ ಎಂದರು.

ಹಿಂದೂ ಮಹಾ ಗಣೇಶೋತ್ಸವನ್ನು ಚಿತ್ರದುರ್ಗದಲ್ಲಿ 2007ರಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ನೇತೃತ್ವದಲ್ಲಿ ಆರಂಭವಾಯಿತು.17 ವರ್ಷಗಳಿಂದ ಹಿಂದೂ ಮಹಾ ಗಣಪತಿ ಉತ್ಸವನ್ನು ವಿಜೃಂಭಣೆಯಿಂದ ಆಚರಿಸಿಕೊಂಡು ಬಂದಿದ್ದೇವೆ. ಒಂದು ತಿಂಗಳು ನಡೆಯುವ ಈ ಉತ್ಸವ ಇಡೀ ದೇಶಾದ್ಯಂತ ಪ್ರಸಿದ್ಧಿ ಪಡೆದಿದೆ. ಈ ಉತ್ಸವಕ್ಕೆ ಕೇವಲ ಚಿತ್ರದುರ್ಗದ ಜನತೆಗೆ ಅಷ್ಟೇ ಅಲ್ಲದೇ ದೇಶ ವಿದೇಶಗಳಿಂದ ಕಾರ್ಯಕರ್ತರು ಬಂದು ಭಾಗವಹಿಸುತ್ತಾರೆ.ಹಿಂದೂ ಮಹಾಗಣಪತಿ ಕಾರ್ಯಕ್ರಮಕ್ಕೆ ವಿವಿಧ ರಾಜ್ಯಗಳಿಂದಲೂ ಸಾವಿರಾರು ಜನ ಉತ್ಸವ ನೋಡಲು ಬರುತ್ತಾರೆ.ಕೊನೆಯಲ್ಲಿ ನಡೆಯುವ ಶೋಭಾಯಾತ್ರೆಯು ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಜನ ಸೇರುವ ಶೋಭಾಯಾತ್ರೆ ಎಂಬ ಖ್ಯಾತಿ ಪಡೆದಿದೆ ಎಂದರು.

ವಿಶ್ವ ಹಿಂದೂ ಪರಿಷತ್ ಜೊತೆಗೆ ಸಾರ್ವಜನಿಕರನ್ನು ಸೇರಿಸಿಕೊಂಡು ಸಮಿತಿ ಮಾಡಿಕೊಂಡು ಗಣೇಶೋತ್ಸವ ಮಾಡುತ್ತಾ ಬಂದಿದ್ದೇವೆ.ಚಿತ್ರದುರ್ಗ ನಡೆಯುವಂತಹ ಹಿಂದೂ ಮಹಾಗಣಪತಿ ಸಂಘ ಹಾಗೂ ವಿಶ್ವ ಹಿಂದೂ ಪರಿಷತ್‍ಗೆ ಹೆಚ್ಚು ಬಲ ತಂದಂತಹ ಕಾರ್ಯಕ್ರವಾಗಿದೆ.ನಾವು ದೇಶದ ವಿವಿದೆಡೆ ನಡೆಯುವ ಬೈಟೆಕ್ ಗಳಲ್ಲಿ  ಚಿತ್ರದುರ್ಗ ಗಣೇಶ ಶೋಭಾಯಾತ್ರೆ ಬಗ್ಗೆ ಪ್ರಸ್ತಾಪ ಮಾಡುತ್ತೇವೆ ಎಂದು ತಿಳಿಸಿದರು.

ಗೋಷ್ಟಿಯಲ್ಲಿ ವಿಶ್ವ ಹಿಂದೂ ಪರಿಷತ್‍ನ ಜಿಲ್ಲಾಧ್ಯಕ್ಷರಾದ ಷಡಾಕ್ಷರಯ್ಯ, ದಕ್ಷಿಣ ಪ್ರಾಂತ್ಯ ಉಪಾಧ್ಯಕ್ಷರಾದ ಡಾ.ಮಂಜುನಾಥ್, ವಿಭಾಗ ಕಾರ್ಯದರ್ಶಿ ಚಂದ್ರಶೇಖರ್ ಚಿತ್ರದುರ್ಗ ಕಾರ್ಯದರ್ಶಿ ಕೇಶವ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...