ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಜು. 25 : ಜಿಲ್ಲಾ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ಧಿ ಸಂಘದವತಿಯಿಂದ ಜುಲೈ 27ರ ಭಾನುವಾರ ನಗರದ ಪಂಚಚಾರ್ಯ ಕಲ್ಯಾಣ ಮಂಟಪದಲ್ಲಿ ನೌಕರರ ಸಮಾವೇಶ, ನಿವೃತ್ತ ನೌಕರರಿಗೆ, ಸಾಧಕರಿಗೆ ಸನ್ಮಾನ ಹಾಗೂ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ರಾದ ಪಿ.ಎಂ.ಜಿ.ರಾಜೇಶ್ ತಿಳಿಸಿದ್ದಾರೆ.
ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಹಿಂದೆಯೂ ಸಹಾ ನಮ್ಮ ಸಂಘದಿಂದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ನಡೆಸಲಾಗುತ್ತಿತ್ತು ಕರೋನ ಬಂದ ಹಿನ್ನಲೆಯಲ್ಲಿ ಅದನ್ನು ನಿಲ್ಲಿಸಲಾಗಿತ್ತು ಆದರೆ ಈಗ ನಮ್ಮ ಸಂಘ ಬಂದ ಮೇಲೆ ಪುನಃ ಪ್ರಾರಂಭ ಮಾಡಲಾಗಿದೆ ಎಂದ ಅವರು, ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 2024-25 ನೇ ಸಾಲಿನಲ್ಲಿ ಹಾಗೂ ಎಸ್‍ಎಸ್‍ಎಲ್.ಸಿಮತ್ತು ಪಿಯುಸಿ ವ್ಯಾಸಂಗ ಮಾಡಿ ಶೇಕಡಾ 80 & ಅದಕ್ಕಿಂತ ಅಧಿಕ ಅಂಕ ಪಡೆದ ಜಿಲ್ಲಾ ಅನುದಾನಿತ ಮತ್ತು ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನಡೆಸಲಾಗುತ್ತಿದ್ದು, ಇದರಲ್ಲಿ ಪರಿಸರ ಸ್ನೇಹಿ ಕಿಟ್, ಪ್ರಮಾಣ ಪತ್ರ, ಫಲಕ, ಶಾಲು ಹಾರದೊಂದಿಗೆ 1000 ರೂ ಮಾತ್ರ ನಗದು ವಿತರಣೆ ಮಾಡಲಾಗುತ್ತಿದೆ. ಇಲ್ಲಿಯವರೆಗ 85 ಮಕ್ಕಳು ಎಸ್‍ಎಸ್‍ಎಲ್‍ಸಿ ಹಾಗು 80 ಪಿಯುಸಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿರುತ್ತಾರೆ.
ಮೇ.31 2024 ರಿಂದ ಜೂನ್30-2025ರವರೆಗೆ ಈವರೆಗೆ ನಿವೃತ್ತಿಯಾಗಿರುವ ಯಾವುದೇ ಇಲಾಖೆಯ ಸಮುದಾಯದ ನಿವೃತ್ತ ನೌಕರರನ್ನು ಸನ್ಮಾನಿಸಲಾಗುವುದು. ಇದ್ದಲ್ಲದೆ ಸಮುದಾಯದ ಜಿಲ್ಲೆಯೊಳಗಿನ ವಿಶೇಷ ಸಾಧನೆಗೈದ 5 ಜನ ಸಾಧಕರಾದ ಸಚಿನ್ ಕೆ.ಎಲ್. ಕೆ.ಎನ್.ಮಲ್ಲಿಕಾರ್ಜನ್, ಎ.ಎಸ್ ಸತೀಶ್, ಜೆ.ಆರ್.ಶಂಕರಪ್ಪ ಹಾಗೂ ಟಿ.ಪಿ.ಉಮೇಶ್ ರವರನ್ನು ಕಾರ್ಯಕ್ರಮದಲ್ಲಿ ಅಭಿನಂದಿಸಿ ಗೌರವಿಸಲಾಗುವುದು. ಹಿರಿಯೂರಿನ ಶಿಕ್ಷಣಾಧಿಕಾರಿಗಳಾದ ಸಿ.ಎಂ ತಿಪ್ಪೆಸ್ವಾಮಿರವರು ಉಪನ್ಯಾಸ ನೀಡಲಿದ್ದಾರೆ.
ಕಾರ್ಯಕ್ರಮದ ಸಾನಿಧ್ಯವನ್ನು ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವ ಕುಮಾರ್ ಸ್ವಾಮಿಜಿ, ಹಾಗೂ ದಾವಣಗೆರೆ ವಿರಕ್ತಮಠದ ಡಾ.ಬಸವ ಪ್ರಭು ಸ್ವಾಮಿಜಿ ವಹಿಸಲಿದ್ದಾರೆ. ಉದ್ಘಾಟನೆಯನ್ನು ಶಾಸಕರಾದ ಕೆ.ಸಿ.ವಿರೇಂದ್ರ ಪಪ್ಪಿರವರು ನಡೆಸಲಿದ್ದಾರೆ. ಅಧ್ಯಕ್ಷತೆಯನ್ನು ಜಿಲ್ಲಾ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಬಿ.ವಿರೇಶ್ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್, ಸಂಸದರಾದ ಗೋವಿಂದ ಕಾರಜೋಳ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಮಾಜಿ ಶಾಸಕರಾದ ಎಸ.ಕೆ.ಬಸವರಾಜನ್, ಜಿಲ್ಲಾ ಕೆ.ಡಿ.ಪಿ ಸದಸ್ಯ ಕೆ.ಸಿ.ನಾಗರಾಜ್, ಕಾಂಗ್ರೆಸ್ ಮುಖಂಡರಾದ ಹನುಮಲಿ ಷಣ್ಮುಖಪ್ಪ, ವೀರಶೈವ ಸಮಾಜದ ಅಧ್ಯಕ್ಷರಾದ ಹೆಚ್.ಎನ್.ತಿಪ್ಪೇಸ್ವಾಮಿ, ಕಾರ್ಯದರ್ಶಿ ಪಿ.ವಿರೇಂದ್ರ ಕುಮಾರ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಮಹಡಿ ಶಿವಮೂರ್ತಿ, ಕಾರ್ಯದರ್ಶಿ ಶಶಿಧರ್ ಬಾಬು, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕೆ.ಎಂ.ವಿರೇಶ್ ಕಸಾಪದ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.
ಯಾವುದಾದರು ನೌಕರರ ಮಕ್ಕಳು ಅನಿವಾರ್ಯ ಕಾರಣದಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದಿದ್ದಲ್ಲಿ ನೇರವಾಗಿ ತಂದೆ/ತಾಯಿಯವರ ಇಲಾಖಾ ಗುರುತಿನ ಚೀಟಿ ಮತ್ತು ವಿದ್ಯಾರ್ಥಿಯ ಅಂಕಪಟ್ಟಿಯೊಂದಿಗೆ ಕಾರ್ಯಕ್ರಮಕ್ಕೆ ಹಾಜರಾದರೆ ಅಂತಹ ಮಕ್ಕಳಿಗೂ ಸಹ ಪುರಸ್ಕರಿಸಲಾಗುವುದು ಎಂದು ತಿಳಿಸಿದರು.
ಗೋಷ್ಟಿಯಲ್ಲಿ ಜಿಲ್ಲಾ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಬಿ.ವಿರೇಶ್, ಕಾರ್ಯಾದ್ಯಕ್ಷರಾದ ಎಂ.ಬಿ.ಕೊಟ್ಟೂರೇಶ್ವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಜಿ.ಅಜಯ್ ಕುಮಾರ್ ಹಾಗೂ ಜಿಲ್ಲಾ ಖಂಜಾಚಿ ಡಿ.ಬಹುಗುಣ ಭಾಗವಹಿಸಿದ್ದರು.

















