ಸುದ್ದಿಒನ್, ಚಿತ್ರದುರ್ಗ, ಜುಲೈ. 26 : ಮಧ್ಯ ಕರ್ನಾಟಕ ಕಾವ್ಯ ಸಂಭ್ರಮ ಕಾರ್ಯಕ್ರಮದ ನಾಳೆ (ದಿನಾಂಕ 27.07.2025, ಭಾನುವಾರ) ನಗರದ ಬಾಪೂಜಿ ಸಮೂಹ ಸಂಸ್ಥೆಗಳ ಆವರಣದಲ್ಲಿ ಬೆಳಗ್ಗೆ 10.30 ಕ್ಕೆ ಜರುಗಲಿದೆ.
ಚಿಕ್ಕಮಗಳೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ಕವಿಗಳು ಈ ಕಾವ್ಯಸಂಭ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಪೂಜಿ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ಕೆ.ಎಂ.ವಿರೇಶ್ ವಹಿಸಲಿದ್ದಾರೆ. ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಕರಿಯಪ್ಪ ಮಾಳಿಗೆ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದಾರೆ. ಶಿವಮೊಗ್ಗದ ಡಾ.ಪುಷ್ಪ ಭಾರತಿ ಕವಿಗೋಷ್ಠಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ದಾವಣಗೆರೆ ಕಸಾಪ ಅಧ್ಯಕ್ಷ ವಾಮದೇವಪ್ಪ, ಚಿಕ್ಕಮಗಳೂರು ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್, ಮತ್ತು ಚಿತ್ರದುರ್ಗ ಕಸಾಪ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ಹುರುಳಿ ಬಸವರಾಜ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಕಸಾಪ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










