Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಕಾರ್ಗಿಲ್ ವಿಜಯ ದಿವಸ ಆಚರಣೆ

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಜು. 26 : ನಗರದ ಭಾರತೀಯ ಜನತಾ ಪಾರ್ಟಿಯವತಿಯಿಂದ ಕಾರ್ಗಿಲ್ ವಿಜಯ ದಿವಸವನ್ನು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಒನಕೆ ಓಬವ್ವ ವೃತ್ತದಲ್ಲಿ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಮಾತನಾಡಿ, ನಮ್ಮ ದೇಶದ ಸೈನಿಕರು ಪಾಕಿಸ್ತಾನಿ ಸೈನ್ಯವನ್ನು ಸದೇ ಬಡಿಯವುದರ ಮೂಲಕ ನಮ್ಮ ಜಾಗವನ್ನು ಆಕ್ರಮಿಸಿದ್ದ ಆವರನ್ನು ಅಲ್ಲಿಂದ ಹೊಡೆದೊಡಿಸಿದ ದಿವಸವಾಗಿದೆ. ಈ ದಿವಸ ಭಾರತೀಯರಿಗೆ ಹೆಮ್ಮೆಯ ದಿನವಾಗಿದೆ. ಇದರಲ್ಲಿ ವೀರ ಮರಣವನ್ನು ಅರ್ಪಿದಿವರಿಗೆ  ಗೌರವನ್ನು ಸಲ್ಲಿಸಿ ಅವರ ಆತ್ಮಕ್ಕೆ ಶಾಂತಿಯನ್ನು ಕೋರಬೇಕಿದೆ.

ಈ ಘಟನೆ ನಡೆದು 26 ವರ್ಷಗಳು ಕಳೆದಿವೆ. ಕಾರ್ಗಿಲ್ ಬೆಟ್ಟಗಳಿಂದ ಉಗ್ರಗಾಮಿಗಳನ್ನು ಹೊಡೆದೋಡಿಸಿದ ಸಂದರ್ಭವನ್ನು ಸ್ಮರಿಸಲು ಇಂದು ದೇಶಾದ್ಯಂತ `ಕಾರ್ಗಿಲ್ ವಿಜಯ್ ದಿವಸ್’ ಆಚರಿಸಲಾಗುತ್ತಿದೆ. ಭಾರತೀಯ ಭೂಪ್ರದೇಶವನ್ನು ಆಕ್ರಮಿಸಿ ಕೊಳ್ಳಲು ಸಂಚು ರೂಪಿಸುತ್ತಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತನ್ನ ಶೌರ್ಯವನ್ನು ಪ್ರದರ್ಶಿಸಿದ ದಿನ ಇದು. `ಆಪರೇಷನ್ ವಿಜಯ್’ ಹೆಸರಿನಲ್ಲಿ ಯುದ್ಧ ಘೋಷಣೆ ಕೂಗುವ ಮೂಲಕ ಶತ್ರು ಪಡೆಗಳನ್ನು ಕಾರ್ಗಿಲ್‍ನಿಂದ ಓಡಿಸಿದ ಸಂದರ್ಭವನ್ನು ಕಾರ್ಗಿಲ್ ವಿಜಯ್ ದಿವಸ್ ಎಂದು ನೆನಪಿಸಿಕೊಳ್ಳುತ್ತೇವೆ ಎಂದರು.

ನಮ್ಮ ದೇಶವನ್ನು ಉಳಿಸಲು ಅತ್ಯಂತ ಕಠಿಣ ಭೂಪ್ರದೇಶದಲ್ಲಿ ಅಸಾಧಾರಣ ಧೈರ್ಯ ಮತ್ತು ದೃಢಸಂಕಲ್ಪದಿಂದ ಹೋರಾಡಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಧೈರ್ಯಶಾಲಿ ಸೈನಿಕರಿಗೆ ಗೌರವ ಸಲ್ಲಿಸುತ್ತೇವೆ ಕಾರ್ಗಿಲ್ ಯುದ್ಧದಲ್ಲಿ ಅವರ ತ್ಯಾಗ ನಮ್ಮ ಸಶಸ್ತ್ರ ಪಡೆಗಳ ದೃಢಸಂಕಲ್ಪಕ್ಕೆ ಸಾಕ್ಷಿಯಾಗಿದೆ. ಈ ದೇಶವು ಅವರಿಗೆ ಎಂದೆಂದಿಗೂ ಋಣಿಯಾಗಿರುತ್ತದೆ ಎಂದು ಕುಮಾರಸ್ವಾಮಿ ತಿಳಿಸಿದರು.

ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ವೆಂಕಟೇಶ್ ಯಾದವ್ ಮಾತನಾಡಿ 1999 ರ ಮೇ-ಜುಲೈನಲ್ಲಿ, ಕಾರ್ಗಿಲ್ ಬೆಟ್ಟಗಳಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಭೀಕರ ಯುದ್ಧ ನಡೆಯಿತು. ಶತ್ರು ಪಡೆಗಳು ನಿಯಂತ್ರಣ ರೇಖೆಯನ್ನು ದಾಟಿ ಭಾರತದ ಪ್ರದೇಶವನ್ನು ಪ್ರವೇಶಿಸಿದವು. ಅವರು ಕಾರ್ಗಿಲ್‍ನಲ್ಲಿ ಖಾಲಿಯಾಗಿದ್ದ ಪ್ರಮುಖ ನೆಲೆಗಳ ಮೇಲೆ ದಾಳಿ ಮಾಡಿದರು. ಅವರ ಆಕ್ರಮಣದ ಬಗ್ಗೆ ತಿಳಿದ ನಂತರ, ಭಾರತೀಯ ಸೇನೆಯು `ಆಪರೇಷನ್ ವಿಜಯ್’ ಎಂಬ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಭಾರತೀಯ ಸೇನೆಯ ಪ್ರತಿದಾಳಿಯಿಂದ ಪಾಕಿಸ್ತಾನಿ ಪಡೆಗಳು ಸೋತವು. ಅವರು `ಪೀಚ್‍ಮಡ್’ ಎಂದು ಹೇಳುತ್ತಾ ಗಡಿಯುದ್ದಕ್ಕೂ ಓಡಿಹೋದರು. ಪಾಕಿಸ್ತಾನಿ ಸೇನೆಯನ್ನು ಓಡಿಸಲಾಗಿದೆ ಎಂದು ಭಾರತೀಯ ಸೇನೆ ಜುಲೈ 26 ರಂದು ಘೋಷಿಸಿತು. ಅಂದಿನಿಂದ, ನಾವು ಪ್ರತಿ ವರ್ಷ ಆ ದಿನವನ್ನು ಕಾರ್ಗಿಲ್ ವಿಜಯ್ ದಿವಸ್ ಎಂದು ಆಚರಿಸುತ್ತಿದ್ದೇವೆ ಎಂದರು.
ಇದೇ ಸಂದರ್ಭದಲ್ಲಿ ಸೈನಿಕರ ಪರವಾಗಿ  ಜೈಕಾರವನ್ನು ಹಾಕಿ ಕಾರ್ಗಿಲ್ ಯುದ್ದದಲ್ಲಿ ಮಡಿದವರಿಗೆ ಶಾಂತಿಯನ್ನು ಸಲ್ಲಿಸಿ ವಿಜಯಯಾಗಿದ್ದಕೆ ಅಲ್ಲಿ ನೆರದಿದ್ದವರಿಗೆ ಸಿಹಿಯನ್ನು ಹಂಚಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯ ರೈತ ಮೋರ್ಚಾದ ಕಾರ್ಯದರ್ಶಿ ಮಲ್ಲಿಕಾರ್ಜುನ್, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ವಕ್ತಾರರಾದ ನಾಗರಾಜ್ ಬೇದ್ರೇ, ದಗ್ಗೆ ಶಿವಪ್ರಕಾಶ್, ಮುಖಂಡರುಗಳಾದ ಚಾಲುಕ್ಯ ನವೀನ್, ತಿಪ್ಪೇಸ್ವಾಮಿ, ನಂದಿ ನಾಗರಾಜ್, ಕವನ, ಶುಂಭು, ಬಸಮ್ಮ, ಶಾಂತಮ್ಮ ರಘು, ಅರುಣ್, ಲಿಂಗರಾಜು, ವರುಣ್, ಪ್ರಭಾಕರ್, ವಸಂತಚಾರ್, ಕಿರಣ್, ಪ್ರಶಾಂತ್ ಕುಮಾರ್ ಮಹಾಂತೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...