Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಜಲಾಶಯಗಳ ನೀರು ಹೆಚ್ಚಳ : ಪ್ರವಾಹದ ಎಚ್ಚರಿಕೆ..!

---Advertisement---

 

ಬೆಂಗಳೂರು: ಮಳೆ ಹೆಚ್ಚಾದ ಹಿನ್ನೆಲೆ ರಾಜ್ಯದ ಜಲಾಶಯಗಳು ಭರ್ತಿಯಾಗುತ್ತಿವೆ. ಇದರಿಂದ ಪ್ರವಾಹದ ಭೀತಿ ಎದುರಾಗಿದೆ. ಹಾರಂಗಿ ಜಲಾಶಯದಲ್ಲಿ 25 ಸಾವಿರ ಕ್ಯೂಸೆಕ್ಸ್ ನೀರನ್ನ ಹೊರ ಬಿಡಲಾಗುವುದು. ಆದ್ದರಿಂದ ಕುಶಾಲನಗರ, ಪಿರಿಯಾಪಟ್ಟಣ ಮತ್ತಿ ಕೆ ಆರ್ ನಗರ ನಿವಾಸಿಗಳು ಸುರಕ್ಷಿತ ಪ್ರದೇಶಗಳಿಗೆ ತೆರಬೇಕು. ಒಳಹರಿವು ಹೆಚ್ಚಾಗಿರುವ ಕಬಿನಿ ಅಣೆಕಟ್ಟಿನಿಂದ ಬರೋಬ್ಬರಿ 40 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ.

ಇದರಿಂದಾಗಿ ಎಚ್.ಡಿ.ಕೋಟೆ, ಟಿ.ನರಸೀಪುರ, ಕೊಳ್ಳೆಗಾಲ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಅಲಗಲಿನ ಸುತ್ತಮುತ್ತಲ ಜನರಿಗೆ ಸುರಕ್ಷಿತವಾಗಿರುವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಭರ್ತಿಯಾಗಿರುವ ಕೃಷ್ಣ ರಾಜ ಸಾಗರ ಜಲಾಶಯಕ್ಕೆ ಭಾರೀ ನೀರು ಹರಿದು ಬರುತ್ತಿದೆ. ಪರಿಣಾಮ ಈ ಡ್ಯಾಂನಿಂದ ಸುಮಾರು 70 ಸಾವಿರ ಕ್ಯೂಸೆಕ್ ನೀರನ್ನ ಹೊರ ಬಿಡಲಾಗುತ್ತಿದೆ. ಹೀಗಾಗಿ ಶ್ರೀರಂಗಪಟ್ಟಣ, ಟಿ ನರಸೀಪುರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಹೇಮಾವತಿ ಅಣೆಕಟ್ಟಿನ ನೀರಿನ ಮಟ್ಟವೂ ಹೆಚ್ಚಾಗಿದೆ. ಇಂದಿನ ನೀರಿನ ಸಂಗ್ರಹ ಮಟ್ಟ 36.137 ಟಿಎಂಸಿ ಇದೆ. ಒಳ ಹರಿವು 38.715 ಕ್ಯೂಸೆಕ್ ನೀರು ಹೆಚ್ಚಾಗಿದೆ. ಹೀಗಾಗಿ ಎಲ್ಲರೂ ಎಚ್ಚರದಿಂದ ಇರಬೇಕು ಎಂದು ಮಾಹಿತಿ ನೀಡಲಾಗಿದೆ. ಆರಂಭದಲ್ಲಿಯೇ ಮಳೆ ಜೋರಾಗಿರುವ ಕಾರಣ, ರೈತರ ಮೊಗದಲ್ಲಿ ಸಂತಸ ಮನೆ ಮಾಡಿದೆ. ಈ‌ಬಾರಿಯ ಬೆಳೆಗೆ, ಜಾನುವಾರುಗಳಿಗೆ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗುವುದಿಲ್ಲ ಎಂಬ ಸಮಾಧಾನ ಅವರದ್ದಾಗಿದೆ. ಈಗಾಗಲೇ ರೈತರು ಕೃಷಿ ಕೆಲಸಗಳನ್ನು ಶುರು ಮಾಡಿಕೊಂಡಿದ್ದಾರೆ. ಮಳೆ, ಚಳಿ ಎಲ್ಲವು ಒಟ್ಟಾಗಿ ಇರುವುದರಿಂದ ಜನಕ್ಕೆ ಹೊರಗೆ ಹೋಗುವುದಕ್ಕೆ ಈ ಚಳಿ ಜಾಸ್ತಿಯಾದಂತ ಫೀಲ್ ಇದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment