ಸರ್ಕಾರದಿಂದ ರಸಗೊಬ್ಬರದ ಕೃತಕ ಅಭಾವ ಸೃಷ್ಟಿ : ಕೆ.ಎಸ್.ನವೀನ್

3 Min Read

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಜು. 27 : ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಾದಂತಹ ಯೂರಿಯಾ ರಸಗೊಬ್ಬರವನ್ನು ವಿಲೇವಾರಿ ಮಾಡುತ್ತಿದೆ. ಆದರೆ ರಾಜ್ಯ ಸರ್ಕಾರ ಸರಿಯಾದ ರೀತಿಯಲ್ಲಿ ವಿತರಣೆ ಮಾಡದೇ ರಸ ಗೊಬ್ಬರವನ್ನು ತಯಾರಿಕೆ ಮಾಡುವಂತಹ ಕೈಗಾರಿಕೆಗಳಿಗೆ ಅಕ್ರಮವಾಗಿ ಮಾರಾಟ ಮಾಡುವವರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ರಾಜ್ಯದಲ್ಲಿ ಯೂರಿಯಾ ಗೊಬ್ಬರದ ಅಭಾವವನ್ನು ಸೃಷ್ಟಿ ಮಾಡಿದ್ದಾರೆ ಎಂದು ಬಿಜೆಪಿಯ ರಾಜ್ಯ ವಕ್ತಾರ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಆರೋಪಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಮಾರ್ಚ್ – ಏಪ್ರಿಲ್ ತಿಂಗಳಲ್ಲಿಯೇ ನಮ್ಮ ರಾಜ್ಯಕ್ಕೆ ಇಷ್ಟೇ ಪ್ರಮಾಣದ ಅಗತ್ಯತೆ ಇದೆ ಎಂದು ಪತ್ರ ಬರೆಯುವುದರ ಮೂಲಕ ಅದರ ಬಿಡುಗಡೆಗೆ ಅಗತ್ಯವಾದಂತಹ ಹಣವನ್ನು ಸಹ ನೀಡಬೇಕು.ಈ ಹಿಂದೆ ನಮ್ಮ ಸರ್ಕಾರವಿದ್ದಾಗ ಇದಕ್ಕೆ ಒಂದು ಸಾವಿರ ಕೋಟಿ ರೂಗಳನ್ನು ನೀಡಲಾಗಿತ್ತು.. ಆದರೆ ಈಗಿನ ಸಿದ್ದರಾಮಯ್ಯನವರ ಸರ್ಕಾರ ಕೇವಲ 400 ಕೋಟಿ ರೂಗಳನ್ನು ಮಾತ್ರ ನೀಡಿ ಉಳಿದಂತಹ 600 ಕೋಟಿ ರೂಗಳಿಗೆ ಖಾಸಗಿ ಕಂಪನಿಗಳಿಗೆ ಅನುಕೂಲವಾಗುವಂತಹ ವಾತಾವರಣವನ್ನು ಕಲ್ಪಿಸಿದೆ ಎಂದು ದೂರಿದರು.

ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದೆ.. ರೈತರ ಬಗ್ಗೆ ಎಳ್ಳಷ್ಟು ಸಹ ಕಾಳಜಿ ವಹಿಸುತ್ತಿಲ್ಲ.ತಮ್ಮ ಅಧಿಕಾರ ಕುರ್ಚಿ ಉಳಿವಿಗಾಗಿ ಹಲವಾರು ಬಾರಿ ದೆಹಲಿ ಪ್ರವಾಸವನ್ನು ಮಾಡಿರುವ ಸಿದ್ದರಾಮಯ್ಯರವರು ಇದರಲ್ಲಿ ಒಂದು ಬಾರಿಯೂ ಸಹ ಕೇಂದ್ರ ಕೃಷಿ ಸಚಿವರನ್ನಾಗಲೀ.ಸಂಬಂಧಪಟ್ಟ ಅಧಿಕಾರಿಗಳನ್ನಾಗಲೀ ಭೇಟಿ ಮಾಡಿ ನಮ್ಮ ರಾಜ್ಯಕ್ಕೆ ಯೂರಿಯಾ ಬೇಡಿಕೆ ಬಗ್ಗೆ ಬೇಡಿಕೆಯನ್ನು ಇಟ್ಟಿಲ್ಲ.ಇಂದಿನ ದಿನಮಾನಗಳಲ್ಲಿ ಏಕಕಾಲದಲ್ಲಿ ಮಳೆ ವ್ಯಾಪಿಸಿದೆ.ರೈತರೆಲ್ಲರೂ ಸಹ ಬಿತ್ತನೆ ಕಾರ್ಯವನ್ನು ಪ್ರಾರಂಭ ಮಾಡಿದ್ದಾರೆ.. ಎಲ್ಲಾ ರೈತರಿಗೂ ಯೂರಿಯಾ ಗೊಬ್ಬರದ ಅವಶ್ಯಕತೆಯಿದೆ.ಇದರ ಬಗ್ಗೆ ಗಮನಹರಿಸಿದ ಸಿದ್ದರಾಮಯ್ಯರವರು ತಮ್ಮ ಕುರ್ಚಿ ಉಳಿವಿಕೆಗಾಗಿ ಗಮನ ನೀಡಿದ್ದಾರೆ ಹೊರತು ಅನ್ನದಾತರ ಬಗ್ಗೆ ಯಾವುದೇ ಗಮನ ನೀಡಿಲ್ಲ ಎಂದು ನವೀನ್ ತಿಳಿಸಿದರು.

ಮುಖ್ಯಮಂತ್ರಿಯವರ ತಪ್ಪಿನಿಂದಾಗಿ ನಾಡಿನ ರೈತರು ಕಷ್ಟಕ್ಕೆ ಸಿಲುಕ ಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.ಇದರ ಬಗ್ಗೆ ಸಂಬಂಧಪಟ್ಟ ಸಚಿವರಾಗಲೀ ಕೃಷಿ ಅಧಿಕಾರಿಗಳಾಗಲೀ ಗಮನ ನೀಡಬೇಕಾಗಿದೆ.ಆಗಸ್ಟ್ -11ರಿಂದ ನಡೆಯುವಂತಹ ವಿಧಾನಸಭೆಯ ಅಧಿವೇಶನದಲ್ಲಿ ಇದರ ಬಗ್ಗೆ ಪೂರ್ಣ ಪ್ರಮಾಣದಲ್ಲಿ ಚರ್ಚೆ ಮಾಡಿ ಮುಖ್ಯಮಂತ್ರಿಗಳ ಹಾಗೂ ಕೃಷಿ ಸಚಿವರ ರಾಜೀನಾಮೆಗೆ ಒತ್ತಾಯಿಸಲಾಗುವುದು ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ರೈತರ ಬಗ್ಗೆ ನಿರ್ಲಕ್ಷ ಧೋರಣೆಯನ್ನು ತಾಳಿದೆ.. ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವುದಕ್ಕಾಗಿಯೇ ಮುಂದಾಗಿದೆ.ಜನರ ಹಿತವನ್ನು ಕಾಯುತ್ತಿಲ್ಲ ಇದರ ಬಗ್ಗೆ ಬಿಜೆಪಿ ರೈತ ಮೋರ್ಚಾದಿಂದ ಆದಷ್ಟು ಬೇಗನೆ ಹೋರಾಟವನ್ನು ಮಾಡಲಾಗುವುದು ಎಂದರು.

ಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಖಂಜಾಚಿ ಮಾಧುರೀ ಗೀರೀಶ್, ಉಪಾಧ್ಯಕ್ಷ ಮೋಹನ್, ರಾಜ್ಯ ರೈತ ಮೋರ್ಚಾದ ಕಾರ್ಯದರ್ಶಿ ಮಲ್ಲಿಕಾರ್ಜನ್, ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ವೆಂಕಟೇಶ್ ಯಾದವ್, ವಕ್ತಾರ ನಾಗರಾಜ್ ಬೇದ್ರೇ ಉಪಸ್ಥಿತರಿದ್ದರು.
—————————————————-
ಚಿತ್ರದುರ್ಗ ಜು. 27

ಧರ್ಮಸ್ಥಳದಲ್ಲಿ ನಡೆದಿರುವಂತಹ ಕೊಲೆಗಳಿಗೆ ಸಂಬಂಧಪಟ್ಟಂತೆ ಎಸ್‍ಐಟಿ ಸಮಿತಿಯನ್ನು ರಚಿಸಿರುವುದು ಸ್ವಾಗತಾರ್ಹ.ಆದರೆ ತನಿಖೆ ನೆಪದಲ್ಲಿ ಧರ್ಮಸ್ಥಳದ ದೇವಸ್ಥಾನಕ್ಕಾಗಲೀ.. ಅದರ ಮುಖಂಡರಿಗಾಗಲೀ ಅಪಮಾನ ಮಾಡುವುದು ಸರಿಯಲ್ಲ ಎಂದು ಬಿಜೆಪಿಯ ರಾಜ್ಯ ವಕ್ತಾರ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ತಿಳಿಸಿದ್ದಾರೆ.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಧಾರ್ಮಿಕ ಸಂಸ್ಥೆ.. ರಾಜ್ಯದಲ್ಲಿ ಈಗಾಗಲೇ ಹಲವಾರು ವಿವಿಧ ಉತ್ತಮ ಕಾರ್ಯಗಳನ್ನು ಮಾಡಿದೆ ಹಲವಾರು ಬಡಜನತೆಗೆ ನೆರವಾಗಿದೆ.ಅಲ್ಲಿ ನಡೆದಿರುವಂತಹ ಕೊಲೆಯಾಗಲೀ.. ಆತ್ಮಹತ್ಯೆಯಂತಹ ಪ್ರಕರಣಗಳ ಬಗ್ಗೆ ಪೂರ್ಣ ಪ್ರಮಾಣದ ತನಿಖೆಯಾಗಲಿ ಆದರೆ ಇದನ್ನ ನೆಪವಾಗಿಟ್ಟುಕೊಂಡು ಧರ್ಮಸ್ಥಳದ ದೇವಸ್ಥಾನದ ಮೇಲೆ ವಿನಹ ಕಾರಣ ಅಪವಾದ ಮಾಡುವುದು.ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ತಿಳಿಸಿದ ಅವರು. ತನಿಖೆ ನ್ಯಾಯಯುತವಾಗಿ ನಡೆಯಲಿ.. ತಪ್ಪಿತಸ್ಥರಿಗೆ ಕಠಿಣವಾದ ಶಿಕ್ಷೆಯಾಗಲಿ.. ಇದಕ್ಕೆ ನಮ್ಮ ಪೂರ್ಣ ಬೆಂಬಲವಿದೆ ಎಂದರು..

ಸಿದ್ದರಾಮಯ್ಯನವರ ಮಗನಾದ ಯತೀಂದ್ರ ಸಿದ್ದರಾಮಯ್ಯರವರು ತಮ್ಮ ಮಾತಿನ ಭರಾಟೆಯಲ್ಲಿ ಮೈಸೂರಿಗೆ ರಾಜ ಮಹಾರಾಜರು ನೀಡಿದಂತಹ ಕಾಣಿಕೆಗಿಂತ ಸಿದ್ದರಾಮಯ್ಯರವರು ಹೆಚ್ಚಿನ ರೀತಿಯಾದಂತಹ ಕೊಡುಗೆಗಳನ್ನು ನೀಡಿದ್ದಾರೆ ಎಂದು ಹೇಳಿಕೆ ನೀಡಿರುವುದು ಹಾಸ್ಯಸ್ಪದವಾಗಿದ್ದು. ಅದು ಈ ವರ್ಷದ ದೊಡ್ಡ ಜೋಕಾಗಿದೆ.ಅತಿ ದೊಡ್ಡ ಜೋಕು ಮಾಡಿದವರಿಗೆ ಪ್ರಶಸ್ತಿ ನೀಡುವುದಾದರೆ ಅದನ್ನು ಯತೀಂದ್ರವರಿಗೆ ನೀಡಬೇಕು. ಸಿದ್ದರಾಮಯ್ಯರವರಿಂದ ಯತೀಂದ್ರರವರಿಗೆ ಹೆಚ್ಚಿನ ಅನುಕೂಲವಾಗಿದೆ ಎಂದು ಹೇಳಿಕೊಳ್ಳುವ ಭರಾಟೆಯಲ್ಲಿ ಮೈಸೂರಿಗೆ ರಾಜ ಮಹಾರಾಜರಿಗಿಂತ ಹೆಚ್ಚು ಅನುಕೂಲ ನೀಡಿದ್ದಾರೆ ಎಂದು ಹೇಳಿದ್ದಾರೆ ಎಂದು ವ್ಯಂಗವಾಡಿದರು.

ಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಖಂಜಾಚಿ ಮಾಧುರೀ ಗೀರೀಶ್, ಉಪಾಧ್ಯಕ್ಷ ಮೋಹನ್, ರಾಜ್ಯ ರೈತ ಮೋರ್ಚಾದ ಕಾರ್ಯದರ್ಶಿ ಮಲ್ಲಿಕಾರ್ಜನ್, ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ವೆಂಕಟೇಶ್ ಯಾದವ್, ವಕ್ತಾರ ನಾಗರಾಜ್ ಬೇದ್ರೇ ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks