Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಜುಲೈ. 28 : ಗ್ರಾಮ ಪಂಚಾಯಿತಿ ನೌಕರರನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಜಿಲ್ಲಾ ಶಾಖೆಯಿಂದ ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಕಾರ್ಮಿಕ ಇಲಾಖೆ ಅಧಿಕಾರಿ ಮೂಲಕ ಕಾರ್ಮಿಕ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಕಾರ್ಮಿಕ ಇಲಾಖೆಗೆ ತೆರಳಿದ ಪ್ರತಿಭಟನಾಕಾರರು ಕನಿಷ್ಠ ವೇತನ ನೀಡದ ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಸಿಐಟಿಯು.ಜಿಲ್ಲಾ ಸಂಚಾಲಕಿ ಎನ್.ನಿಂಗಮ್ಮ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ಗ್ರಾಮ ಪಂಚಾಯಿತಿ ನೌಕರರಿಗೆ ತಿಂಗಳಿಗೆ 36 ಸಾವಿರ ರೂ.ಗಳ ವೇತನ ನಿಗಧಿಪಡಿಸಿ ಪ್ರತಿ ತಿಂಗಳು ಐದನೆ ತಾರೀಖಿನೊಳಗೆ ಪಾವತಿಸಬೇಕು. ಬಿಲ್ ಕಲೆಕ್ಟರ್‍ಗಳಿಗೆ ಕಾರ್ಯದರ್ಶಿ ಹುದ್ದೆಗೆ ಬಡ್ತಿ ನೀಡಬೇಕು. ಸ್ವಚ್ಚವಾಹಿನಿಯವರಿಗೆ ವರ್ಷಗಟ್ಟಲೆ ಸಂಬಳ ನೀಡಿಲ್ಲ. ಕೂಡಲೆ ವೇತನ ಪಾವತಿಸಿ ಸ್ವಚ್ಚತೆಗಾಗಿ ವಾಹನ ನೀಡಿ ಗ್ರಾಮ ಪಂಚಾಯಿತಿ ನೌಕರರೆಂದು ಪರಿಗಣಿಸುವಂತೆ ಮನವಿ ಮಾಡಿದರು.

ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷ ಡಿ.ಎಂ.ಮಲಿಯಪ್ಪ ಮಾತನಾಡಿ ಗ್ರಾಮ ಪಂಚಾಯಿತಿಗಳಲ್ಲಿ ದುಡಿಯುತ್ತಿರುವ ಸಿಬ್ಬಂದಿಗಳಿಗೆ ಸೇವಾ ಹಿರಿತನದ ಮೇಲೆ ಮೂಲ ವೇತನಕ್ಕೆ ಶೇ. 2 ರಷ್ಟು ಹೆಚ್ಚಳ ಪ್ರತಿ ವರ್ಷ ಪರಿಗಣಿಸಿ ಹೆಚ್ಚುವರಿ ಭತ್ಯೆ ನೀಡಬೇಕು. ಸ್ವಚ್ಚವಾಹಿನಿ ಚಾಲಕರು ಮತ್ತು ಹೆಲ್ಪರ್‍ಗಳು ಗ್ರಾಮ ಪಂಚಾಯಿತಿಗಳಲ್ಲಿ ಹಗಲು-ರಾತ್ರಿ ದುಡಿಯುತ್ತಿದ್ದಾರೆ. ಸರ್ಕಾರಿ ಆದೇಶದಂತೆ ಇವರುಗಳಿಗೆ ಕಡ್ಡಾಯವಾಗಿ ವೇತನ ಪಾವತಿಸಿ ಹದಿನೈದು ಸಾವಿರ ರೂ. ಸಂಬಳ ಹೆಚ್ಚಿಸಬೇಕೆಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಉಪಾಧ್ಯಕ್ಷ ವೆಂಕಟೇಶ್, ಖಜಾಂಚಿ ಶಿವಣ್ಣ, ಪ್ರಧಾನ ಕಾರ್ಯದರ್ಶಿ ರಂಗನಾಥ್, ಜಯಲಕ್ಷ್ಮಿ, ಮಾರಪ್ಪ, ಸಂತೋಷ್, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ಪ್ರಧಾನ ಕಾರ್ಯದರ್ಶಿ ವೈ.ಕುಮಾರ್ ಸೇರಿದಂತೆ ಗ್ರಾಮ ಪಂಚಾಯಿತಿ ನೌಕರರು ಸ್ವಚ್ಚವಾಹಿನಿ ಚಾಲಕರು, ಹೆಲ್ಪರ್‍ಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment