Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ವಿದ್ಯಾ ವಿಕಾಸ ಶಾಲೆಯ ವಿದ್ಯಾರ್ಥಿಗಳು ರಿಜನಲ್ ಹಂತಕ್ಕೆ ಆಯ್ಕೆ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 28 : ಜುಲೈ 25 ರಂದು ಹಿರಿಯೂರಿನಲ್ಲಿ ನಡೆದ ಐಸಿಎಸ್‍ಇ ವಿಭಾಗದ ಝೊನಲ್ ಹಂತದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ಐಸಿಎಸ್‍ಇ ವಿಭಾಗದ ವಿದ್ಯಾರ್ಥಿಗಳು ಬಾಲಕರ ಸಿಂಗಲ್ಸ್ 10ನೇ ತರಗತಿಯ ಶ್ರೇಯಸ್ ಎಸ್ ಜಿ ಮತ್ತು ಬಾಲಕಿಯರ ಡಬಲ್ಸ್‍ನಲ್ಲಿ 8ನೇ ತರಗತಿಯ ವಿದ್ಯಾರ್ಥಿನಿಯರಾದ ವರ್ಷ ಎಂ ಜೆ ಮತ್ತು ವೃಂದಾ ಕೆ ಜಿ ಪ್ರಥಮ ಸ್ಥಾನ ಪಡೆದು 29ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಿಜನಲ್ ಹಂತಕ್ಕೆ ಆಯ್ಕೆಯಾಗಿದ್ದಾರೆ.

ದಿನಾಂಕ : 26.07.2025 ರಂದು ನಡೆದ ಐಸಿಎಸ್‍ಇ ವಿಭಾಗದ ಝೊನಲ್ ಹಂತದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ವಿದ್ಯಾ ವಿಕಾಸ ಐಸಿಎಸ್‍ಇ ಶಾಲೆಯ 14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಶ್ರೀ ಶಂಕರ್ ಮತ್ತು ತಂಡ, ಹಾಗೂ 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಶೋಭಿತ್ ಹೆಚ್ ಮತ್ತು ತಂಡ ಪ್ರಥಮ ಸ್ಥಾನ ಗಳಿಸಿದ 2 ತಂಡಗಳು ಜುಲೈ 31ರಂದು ಮತ್ತು ಆಗಸ್ಟ್ 1 ರಂದು ಬೆಂಗಳೂರಿನಲ್ಲಿ ನಡೆಯುಲಿರುವ ರಿಜನಲ್ ಹಂತಕ್ಕೆ ಆಯ್ಕೆಯಾಗಿದ್ದಾರೆ.

ಝೊನಲ್ ವಿಭಾಗದಿಂದ ಬೆಂಗಳೂರಿನಲ್ಲಿ ನಡೆಯುವ ರಿಜನಲ್ ವಿಭಾಗಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದ ಈ ಕ್ರೀಡಾಪಟುಗಳಿಗೆ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ.ಬಿ.ವಿಜಯ್ ಕುಮಾರ್, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ.ಎಸ್.ಎಂ.ಪೃಥ್ವೀಶ, ಹಾಗೂ ನಿರ್ದೇಶಕರಾದ ಶ್ರೀಮತಿ ಸುನಿತಾ.ಪಿ.ಸಿ ಸಂಸ್ಥೆಯ ಐಸಿಎಸ್‍ಇ ಪ್ರಾಚಾರ್ಯರಾದ ಬಸವರಾಜಯ್ಯ.ಪಿ, ಮುಖ್ಯ ಶಿಕ್ಷಕರಾದ ತಿಪ್ಪೇಸ್ವಾಮಿ.ಎನ್.ಜಿ ಮತ್ತು ಎಲ್ಲಾ ಶಿಕ್ಷಕ/ಶಿಕ್ಷಕೇತರ ವೃಂದದವರು ಶ್ಲಾಘಿಸಿ ಅಭಿನಂದಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment