Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಸ ಗೊಬ್ಬರ ಪೂರೈಸುವಲ್ಲಿ ಸರ್ಕಾರ ವಿಫಲ : ಕೆ ಅಭಿನಂದನ್

---Advertisement---

ಸುದ್ದಿಒನ್, ಹಿರಿಯೂರು, ಜುಲೈ. 28 : ರಾಜ್ಯದಲ್ಲಿ ರೈತರಿಗೆ ಬೇಕಾದ ಯೂರಿಯಾ ಸಮಸ್ಯೆಯನ್ನು ಬಗೆಹರಿಸುವಲ್ಲಿ ಸರ್ಕಾರ ಹಾಗೂ ಕೃಷಿ ಸಚಿವರು ವಿಫಲವಾಗಿದ್ದಾರೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಕೆ ಅಭಿನಂದನ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಅವರು ರೈತರು ಯೂರಿಯಾ ಕೊಳ್ಳಲು ಪರದಾಟ ನಡೆಸುತ್ತಿದ್ದು, ಸರ್ಕಾರ ಕ್ರಮ ಕೈಗೊಳ್ಳದೆ ಕೈಕಟ್ಟಿ ಕುಳಿತಿದೆ. ರಾಜ್ಯ ಸರ್ಕಾರ ರಸಗೊಬ್ಬರ ವಿತರಣೆ ಮಾಡುವಲ್ಲಿ ಮೊಂಡುತನ ಪ್ರದರ್ಶಿಸುತ್ತಿದ್ದು, ತನ್ನ ತಪ್ಪು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರ ಹಿತ ದೃಷ್ಟಿ ಕಾಪಾಡಲು ರಾಜ್ಯಕ್ಕೆ 8.73 ಲಕ್ಷ ಟನ್ ಯೂರಿಯಾ ಪೂರೈಸಿದೆ. ಆದರೆ ಇಲ್ಲಿನ ರಾಜ್ಯ ಸರ್ಕಾರ ಸಮರ್ಪಕವಾಗಿ ವಿತರಿಸದೇ ದುಪ್ಪಟ್ಟು ಬೆಲೆಗೆ ಮಾರಾಟ ಮಾಡುವ ಹುನ್ನಾರ ನಡೆಸಿ, ರೈತರನ್ನು ಬೀದಿಗೆ ತಳ್ಳಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ಪೂರೈಸಿರುವ 8.73ಲಕ್ಷ ಟನ್ ಗೊಬ್ಬರದಲ್ಲಿ 6.55 ಲಕ್ಷ ಟನ್ ಯೂರಿಯಾ ಮಾರಾಟ ಮಾಡಿರುವುದಾಗಿ ಕೃಷಿ ಸಚಿವರು ಹೇಳಿದ್ದಾರೆ. ಹಾಗಾದ್ರೆ ಉಳಿದ 1.94 ಮೆಟ್ರಿಕ್ ಟನ್ ಗೊಬ್ಬರ ಯಾರ ಕೈಸೇರಿದೆ ಎಂದು ಪ್ರಶ್ನಿಸಿದರು. ಒಂದು ವೇಳೆ ಗೋದಾಮಿನಲ್ಲಿ ದಾಸ್ತಾನುವಾಗಿದ್ದಾರೆ ವಿತರಣೆ ಮಾಡಲು ವಿಳಂಬ ಯಾಕೆ?. ಕೂಡಲೇ ರೈತರಿಗೆ ಯೂರಿಯಾ ಗೊಬ್ಬರ ಪೂರೈಕೆ ಮಾಡಲು ಸರ್ಕಾರ ಮುಂದಾಗಬೇಕು ಇಲ್ಲವಾದರೆ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಅವರು ಎಚ್ಚರಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರೇಣುಕಾಸ್ವಾಮಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌: ಬೆದರಿಕೆ ಪ್ರಕರಣದ ಉದ್ಯಮಿ ಜೊತೆ ವಿಜಯಲಕ್ಷ್ಮಿ ಕಾಣಿಸಿಕೊಂಡಿದ್ದೇಕೆ?

ಏತ ನೀರಾವರಿ ಯೋಜನೆಗೆ ಭೂಮಿ ಪೂಜೆ: ಮಾಯಕೊಂಡ ಕ್ಷೇತ್ರ ಅಭಿವೃದ್ಧಿಗೆ ಸರ್ಕಾರದ ಬದ್ಧ : ಸಚಿವ ಎಸ್.ಎಸ್. ಮಲ್ಲಿಕಾರ್ಜುನ

ಕಾವ್ಯ ಬರೆಯುವುದು, ಕಟ್ಟುವುದು ಹೃದಯಕ್ಕೆ ಸಂಬಂಧಿಸಿದ ಕೆಲಸ: ಇತಿಹಾಸ ಸಂಶೋಧಕ ಡಾ. ಬಿ. ರಾಜಶೇಖರಪ್ಪ

ಹನುಮಾನ್ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದವನ ವಿರುದ್ಧ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು : ಬೊಮ್ಮಾಯಿ

ಬಾಂಗ್ಲಾದೇಶದಲ್ಲಿ ನಿವೃತ್ತ ಶಿಕ್ಷಕ ಸೇರಿ ಒಂದೇ ಕುಟುಂಬದ ನಾಲ್ವರ ಸಾವು : ಮನೆಯಲ್ಲಿ ಮೃತದೇಹಗಳು ಪತ್ತೆ.!

Leave a Comment