Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ : ಕಾರು – ಬೈಕ್ ಡಿಕ್ಕಿ : ಇಬ್ಬರು ಸಾವು…!

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಜುಲೈ. 29 : ನಗರದ ಹೊರವಲಯದ ವೀರದಿಮ್ಮನಹಳ್ಳಿ ಕ್ರಾಸ್ ಬಳಿ ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ತಳಕು ಗ್ರಾಮದ ಮಂಜುಳಾ (30 ವರ್ಷ )ಹಾಗೂ ಅಭಿಷೇಕ್ (31) ಎಂದು ಗುರುತಿಸಲಾಗಿದೆ. ಚಳ್ಳಕೆರೆ ಕಡೆಯಿಂದ ಬಳ್ಳಾರಿ ಕಡೆಗೆ ವಿರುದ್ಧ ದಿಕ್ಕಿನಲ್ಲಿ ಅತೀವೇಗವಾಗಿ ಮತ್ತು ಆಜಾಗರುಕತೆಯಿಂದ ಚಾಲನೆ ಮಾಡಿಕೊಂಡು ಬಂದ ಕಾರು ಎದುರಿಗೆ ತಳಕು ಕಡೆಯಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನ ಚಾಲಕ ನಾಗರಡ್ಡೆಪ್ಪನಿಗೆ ಗಾಯಗಳಾಗಿದ್ದು, ಆತನನ್ನು ಚಳ್ಳಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರಿನ ಚಾಲಕನ ವಿರುದ್ಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಪೊಲೀಸ್ ಇನ್ಸ್ ಪೆಕ್ಟರ್ ಕುಮಾರ್ ಹಾಗೂ ಪಿಎಸ್ಐ ಧಾರಪ್ಪ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment