Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ಕೊಟ್ರು ಲಕ್ಷ್ಮೀ ಹೆಬ್ಬಾಳ್ಕರ್

ಹೆಬ್ಬಾಳ್ಕರ್
---Advertisement---

ಅಂಗನವಾಡಿ ಕಾರ್ಯಕರ್ತೆಯರ ಸಂಬಂಧ ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಒಂದು ಗುಡ್ ನ್ಯೂಸ್ ನೀಡಿದ್ದಾರೆ. ಅದುವೆ ಚುನಾವಣಾ ಕೆಲಸಗಳಲ್ಲಿ ವಿನಾಯಿತಿ. ಚುನಾವಣೆಗಳು ಶುರುವಾಗಿ ಬಿಟ್ಟರಂತು ಶಾಲಾ ಶಿಕ್ಷರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ನಿದ್ದೆ ಇಲ್ಲದ ದಿನಗಳಾಗಿ ಬಿಡುತ್ತವೆ. ಕೆಲಸದ ಒತ್ತಡವೂ ಹೆಚ್ಚಾಗಿರುತ್ತದೆ. ಹೀಗಾಗಿ ಎಷ್ಟೊ ಜನ ಇದರಿಂದ ಮುಕ್ತಿ ಸಿಕ್ಕಿದರೆ ಸಾಕು ಎನ್ನುವವರು ಇದ್ದಾರೆ. ಇದೀಗ ಅದಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್ ಅನ್ನೇ ನೀಡಿದ್ದಾರೆ.

ಮುಂದಿನ ಅಕ್ಟೋಬರ್ ವೇಳೆಗೆ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರೊಂದಿಗೆ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.

ಇದೆ ವೇಳೆ ರಾಜ್ಯದಲ್ಲಿ ಶುರುವಾಗಿರುವ ಲಿಂಗಾಯತ – ವೀರಶೈವದ ಬಗ್ಗೆ ಮಾತನಾಡಿ, ನಾವ್ಲರೂ ಒಂದು ಎನ್ನುವ ತತ್ವದಲ್ಲಿ ನಂಬಿಕೆ ಇಟ್ಟುಕೊಂಡವರು ನಾವು ವೀರಶೈವ ಲಿಂಗಾಯತ ಸಮಾಜದವರು‌. ಒಂದು ರೊಟ್ಟಿಯನ್ನು ಎಲ್ಲರಿಗೂ ಹಂಚಿ ತಿನ್ನುವ ಮನೋಭಾವ ಹೊಂದಿರುವ ಸಮಾಜ ನಮ್ಮದು. ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಬಸವ ತತ್ವಗಳನ್ನು ಅಳವಡಿಸಿಕೊಂಡು ಕಾರ್ಯ ನಿರ್ವಹಣೆ ಮಾಡುತ್ತಿದೆ. ಬಸವಣ್ಣನವರನ್ನು ರಾಜ್ಯ ಸರ್ಕಾರ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಬಸವ ತತ್ವಗಳನ್ನು ಅಳವಡಿಸಿಕೊಂಡಿದೆ. ಸಾಮಾಜಿಕ ನ್ಯಾಯ ನೀಡುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ. ನಮ್ಮ ಸಮಾಜದ ಮಕ್ಕಳು ಕೇವಲ ಇಂಜಿನಿಯರಿಂಗ್, ವೈದ್ಯಕೀಯ ಪದವಿ ಪಡೆಯಬೇಕು ಎಂಬ ಮನೋಭಾವದಿಂದ ಹೊರಬಂದು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಬೇಕು. ಸಮಾಜದ ಹೆಚ್ಚು ಮಕ್ಕಳು ಐಎಎಸ್‌, ಐಪಿಎಸ್ ಅಧಿಕಾರಿಗಳಾಗಬೇಕು, ಇದೇ ನನ್ನ ಹೆಬ್ಬಯಕೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment