Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದ ಪ್ರವಾಸಿಗ : ಮುಂದೇನಾಯ್ತು ?

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 29 : ಚಿತ್ರದುರ್ಗದ ಕಲ್ಲಿನ ಕೋಟೆ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತದೆ. ಕೋಟೆಯನ್ನು ವೀಕ್ಷಿಸಲು ಬಂದ ಪ್ರವಾಸಿಗರು ಕೋಟೆಯ ರಮಣೀಯ ದೃಶ್ಯಗಳನ್ನು ಕಂಡು ಮೈಮರೆಯುತ್ತಾರೆ. ಆದರೆ ಕೆಲವೊಮ್ಮೆ ಪ್ರವಾಸಿಗರ ಅಜಾಗರೂಕತೆಯಿಂದ ಅಥವಾ ಆಯತಪ್ಪಿ ಬೆಟ್ಟದ ಮೇಲಿಂದ ಬಿದ್ದು ಸಣ್ಣಪುಟ್ಟ ಗಾಯಗಳಾಗುತ್ತವೆ.

ಇಂತಹುದೇ ಘಟನೆ ಇಂದು ಕೋಟೆಯಲ್ಲಿ ನಡೆದಿದೆ. ಸಂಜೆ 6 ಗಂಟೆ ಸಮಯದಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕ್ಕಟಾನೂರು ಗ್ರಾಮದ ಧರೆಯಪ್ಪ ಕುಮಟಗಿ (21 ವರ್ಷ) ಎಂಬ ಪ್ರವಾಸಿರೊಬ್ಬರು ಕೋಟೆಯ ಸೌಂದರ್ಯವನ್ನು ಸವಿಯುತ್ತಾ ಕಾಲುಜಾರಿ ಬಿದ್ದಿದ್ದಾರೆ. ತುಪ್ಪದ ಕೊಳ ಹತ್ತುವ ಸಂದರ್ಭದಲ್ಲಿ ಕಾಲು ಜಾರಿ ಸುಮಾರು 20 ಅಡಿ ಆಳದ ಕಂದಕಕ್ಕೆ ಬಿದ್ದಿದ್ದಾರೆ. ಕೂಡಲೇ ಅಲ್ಲಿದ್ದ ಪ್ರವಾಸಿ ಮಿತ್ರರು ಮತ್ತು sis ಸೆಕ್ಯೂರಿಟಿಗಳು ಪ್ರವಾಸಿಗನನ್ನು ರಕ್ಷಣೆ ಮಾಡಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆರೋಗ್ಯವಾಗಿದ್ದಾರೆಂದು ಪ್ರವಾಸಿ ಮಿತ್ರರು ಸುದ್ದಿಒನ್ ಗೆ ತಿಳಿಸಿದ್ದಾರೆ.

ಕಾಲುಜಾರಿ ಬಿದ್ದ ಪ್ರವಾಸಿಗ ಧರೆಯಪ್ಪ ಕುಮಟಗಿ ಅವರನ್ನು ಸುರಕ್ಷಿತವಾಗಿ ರಕ್ಷಿಸುವಲ್ಲಿ sis ಸೆಕ್ಯೂರಿಟಿಗಳಾದ ಚಿದಾನಂದ, ಸುರೇಶ, ಹನುಮಂತ, ಸುನಿಲ್ ಕುಮಾರ್, ಆನಂದ, ನವೀನ್, ಹಾಗೂ ಪ್ರವಾಸಿ ಮಿತ್ರ ಸಿಬ್ಬಂದಿಗಳಾದ
ಆರ್ ಮಹೇಶ್, ಎಂ ಜಿ ಅಭಿಲಾಶ್, ತಿಪ್ಪೇಸ್ವಾಮಿ, ದಾದಾಪೀರ್, ನವೀನ್ ಕುಮಾರ್, ಡಿ.ಶಂಕರ್ ಹಾಗೂ ಎಸ್, ಮಂಜುನಾಥ ಅವರು ಶ್ರಮಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment