Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಸ್ತೆ ಅಗಲೀಕರಣಕ್ಕೆ ಮುಖ್ಯಮಂತ್ರಿಗಳಿಂದ ಗ್ರೀನ್ ಸಿಗ್ನಲ್ : ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 31 : ಚಿತ್ರದುರ್ಗ ಜಿಲ್ಲಾ ಅಭಿವೃದ್ಧಿಯ ವಿಚಾರ ಕುರಿತಂತೆ ಮುಖ್ಯಮಂತ್ರಿಯ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಚಿತ್ರದುರ್ಗ ತಾಲೂಕು ಶಾಸಕರಾದ ಕೆ.ಸಿ ವೀರೇಂದ್ರ (ಪಪ್ಪಿ) ಅವರು ಚರ್ಚಿಸಿದ್ದಾರೆ.

ಬೆಂಗಳೂರಿನ ವಿಕಾಸ ಸೌಧದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಚಿತ್ರದುರ್ಗ ನಗರದ ಅಭಿವೃದ್ಧಿ ವಿಚಾರದ ಬಗ್ಗೆ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) ಅವರು ಚರ್ಚಿಸಿ ಅಭಿವೃದ್ಧಿ ಕಾರ್ಯಗಳ ಕ್ರಮ ಆದೇಶ ನೀಡುವಂತೆ ಮನವಿ ಮಾಡಿದ್ದಾರೆ.

ಚಿತ್ರದುರ್ಗ ನಗರದ ಮುಖ್ಯ ರಸ್ತೆ ಅಗಲೀಕರಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ನಗರದ ಮುಖ್ಯ ರಸ್ತೆಯನ್ನ ಡಿಪಿಆರ್ ಮಾಡುವಂತೆ ನಿರ್ದೇಶನವನ್ನು ನೀಡಿದ್ದಾರೆ ಮತ್ತು ಚಿತ್ರದುರ್ಗ ನಗರದ ಹೊರವಲಯದ ಕುಂಚಿಗನಾಳ್ ಬಳಿ ಇರುವ ನೂತನ ಜಿಲ್ಲಾಧಿಕಾರಿ ಕಟ್ಟಡವನ್ನು ಮೆಡಿಕಲ್ ಕಾಲೇಜಿಗೆ ಹಸ್ತಾಂತರಿಸಿ ಚಿತ್ರದುರ್ಗ ನಗರದ ಜಿಲ್ಲಾಧಿಕಾರಿ ವಸತಿಗೃಹದ ಸಮೀಪದಲ್ಲಿ ನೂತನವಾಗಿ ಜಿಲ್ಲಾಧಿಕಾರಿ ಕಚೇರಿಯನ್ನು ನಿರ್ಮಿಸುವಂತೆ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದ್ದಾರೆ.

ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷ ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಹೊಸದುರ್ಗದ ಶಾಸಕ ಗೋವಿಂದಪ್ಪ, ಚಿತ್ರದುರ್ಗ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ)  ಅವರು ಚಿತ್ರದುರ್ಗ ಜಿಲ್ಲೆಯ ಅಭಿವೃದ್ಧಿ ವಿಚಾರದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment