Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ : ಬಿ.ವಿ.ತುಕಾರಾಂರಾವ್ ಸಲಹೆ

---Advertisement---
ಚಿತ್ರದುರ್ಗ. ಆಗಸ್ಟ್ .02: ವಿದ್ಯಾರ್ಥಿಗಳು ಪಠ್ಯದ ಕಲಿಕೆ ಜೊತೆಗೆ ಸೃಜನಶೀಲ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಇದರಿಂದ ಭವಿಷ್ಯದಲ್ಲಿ ಸಮಾಜದಲ್ಲಿ ಉತ್ತಮ ಅವಕಾಶಗಳು ದೊರೆತರೆ ನಾಡಿನಲ್ಲಿ ಒಳ್ಳೆಯ ಹೆಸರು ಗಳಿಸಲು ಸಾಧ್ಯವಿದೆ ಎಂದು ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಹೇಳಿದರು.
ನಗರದ ಜೋಗಿಮಟ್ಟಿ ರಸ್ತೆಯ ಪರಿಶಿಷ್ಟ ವರ್ಗಗಳ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಶುಕ್ರವಾರ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರಿಗೆ ಸುಗಮ ಸಂಗೀತ, ಹಾರ್ಮೋನಿಯಂ ಹಾಗೂ ತಬಲಾ ವಾದ್ಯ ಕಲಿಕಾ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಉತ್ತಮ ಅಂಕ ಗಳಿಸಿ, ಉತ್ತೀರ್ಣರಾಗುವ ವಿದ್ಯಾರ್ಥಿಗಳು ಮಾತ್ರ ಪ್ರತಿಭಾವಂತರಲ್ಲ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವವರು ಸಹ ಪ್ರತಿಭಾವಂತರಾಗಿ ನಮ್ಮ ನಾಡಿನ ಹಾಗೂ ದೇಶಕ್ಕೆ ಕೀರ್ತಿ ತರಲು ಸಾಧ್ಯವಿದೆ ಎಂದು ಹೇಳಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಯುವ ಜನರ ಪ್ರತಿಭೆಗಳ ಅನಾವರಣಕ್ಕೆ ಯುವ ಸೌರಭ, ಸಾಂಸ್ಕøತಿಕ ಸೌರಭ, ಸುಗ್ಗಿ-ಹುಗ್ಗಿ, ಜನಪರ ಉತ್ಸವ, ಗಿರಿಜನ ಉತ್ಸವ, ಚಿಗುರು ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ತಿಳಿಸಿದ ಅವರು, ನಮ್ಮ ದೇಶವು ವೈವಿದ್ಯಮಯವಾದ ಸಂಸ್ಕøತಿ ಹೊಂದಿದ್ದು, ಒಂದೊಂದು ನಾಡಿನಲ್ಲಿ ಒಂದೊಂದು ಬಗೆಯ ಸಂಸ್ಕøತಿ ಇದೆ. ಭಾರತ ದೇಶ ಸುತ್ತಿದರೆ ಇಡೀ ಜಗತ್ತನ್ನು ಸುತ್ತಿದಂತೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಬಹಳಷ್ಟು ವಿದ್ಯಾರ್ಥಿಗಳು ಕಲೆಯಲ್ಲಿ ವೈವಿದ್ಯಮಯ ಪ್ರತಿಭೆ ಹೊಂದಿದ್ದು, ಸುಪ್ತವಾಗಿ ಅಡಗಿರುವ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ, ಪ್ರತಿಭೆಗಳ ಗುರುತಿಸುವ ಕಾರ್ಯ ಶಾಲಾ ಹಾಗೂ ಕಾಲೇಜು ಮಟ್ಟದಲ್ಲಿ ಆಗಬೇಕಿದೆ. ಆಸಕ್ತಿದಾಯಕವಾಗಿರುವ ಕ್ಷೇತ್ರಗಳ ಗುರುತಿಸಿ, ಅವರಿಗೆ ಆ ಕ್ಷೇತ್ರದಲ್ಲಿ ತರಬೇತಿ ಕೊಡುತ್ತಿರುವುದು ನಿಜಕ್ಕೂ ಉತ್ತಮ ಕೆಲಸ. ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಸುಗಮ ಸಂಗೀತ, ಹಾರ್ಮೋನಿಯಂ ಹಾಗೂ ತಬಲಾ ವಾದ್ಯ ಕಲಿಕಾ ತರಬೇತಿ ನೀಡುವುದರಿಂದ ಭವಿಷ್ಯದಲ್ಲಿ ಉತ್ತಮ ಅವಕಾಶಗಳು ಲಭಿಸಲಿವೆ ಎಂದು ತಿಳಿಸಿದ ಅವರು, ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಕಲಿಕೆಯ ಗುಣಮಟ್ಟ ಹೆಚ್ಚಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಿ.ಎಂ. ಗುರುನಾಥ್ ಮಾತನಾಡಿ, ಮಾನಸಿಕ ನೆಮ್ಮದಿ ಹಾಗೂ ಹರ್ಷವನ್ನು ಕೊಡುವ ಮಾಧ್ಯಮ ಸಂಗೀತ, ಕಲಾ ಮಾಧ್ಯಮವಾಗಿದೆ. ಚಿತ್ರದುರ್ಗದ ನೆಲ ಸಂಗೀತ, ಸಾಹಿತ್ಯ, ಸಂಸ್ಕøತಿಗೆ ತುಂಬಾ ಹೆಸರುವಾಸಿಯಾದ ನೆಲ. ಸಂಗೀತ, ಸಾಹಿತ್ಯ, ಕಲೆ, ಸಂಸ್ಕøತಿಯು ನಮ್ಮ ಬದುಕಿನ ಭಾಗವೂ ಹೌದು ಎಂದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರಿಗೆ ಸುಗಮ ಸಂಗೀತ, ಹಾರ್ಮೋನಿಯಂ ಹಾಗೂ ತಬಲಾ ವಾದ್ಯ ಕಲಿಕಾ ತರಬೇತಿಯನ್ನು ಸುಮಾರು 6 ತಿಂಗಳ ಕಾಲ ನೀಡಲಿದ್ದು, ವಾರದಲ್ಲಿ 3 ದಿನ ತರಬೇತಿ ನಡೆಯಲಿದೆ. ವಿದ್ಯಾರ್ಥಿಗಳು ಆಸಕ್ತಿವಹಿಸಿ ಕಲಿಯುಬೇಕಿದೆ ಎಂದು ಹೇಳಿದರು.
ಕಾರ್ಯಕ್ರಮಲ್ಲಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ದಿವಾಕರ್, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಂ.ಟಿ. ಶಿವರಾಜ್, ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ನಿಲಯ ಪಾಲಕಿ ಕೆ.ಎಸ್.ವೈಶಾಲಿ, ಹೊಸದುರ್ಗದ ಸುಗಮ ಸಂಗೀತ ಕಲಾವಿದ ಓ.ಮೂರ್ತಿ ಸೇರಿದಂತೆ ಸರ್ಕಾರಿ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ವಿದ್ಯಾರ್ಥಿನಿಯರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...