ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಚಿತ್ರದುರ್ಗ. ಆ. 04 : ನಗರದ ಜೆಸಿಆರ್ ಬಡಾವಣೆಯಲ್ಲಿನ ಸರ್ಕಾರಿ ಮಾದರಿ ಹಿರಿಯ ಶಾಲೆಯಲ್ಲಿ ರೋಟರಿ ಕ್ಲಬ್‌ವತಿಯಿಂದ ಶಾಲೆಯಲ್ಲಿನ ಮಕ್ಕಳಿಗೆ ದಂತ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಶಿಬಿರದಲ್ಲಿ ಶಾಲೆಯಲ್ಲಿನ 150 ಮಕ್ಕಳ ದಂತವನ್ನು ತಪಾಸಣೆಯನ್ನು ಡಾ. ಜಯಚಂದ್ರ ಮತ್ತು ತಂಡ ನಡೆಸಿಕೊಟ್ಟರು, ಈ ಸಮಯದಲ್ಲಿ ಮಕ್ಕಳಿಗೆ ನೀಡಲಾದ ಚೀಟಿಯನ್ನು ನಗರದ ಎಸ್.ಜೆ.ಎಂ. ದಂತ ಮಹಾ ವಿದ್ಯಾಲಯಕ್ಕ ಭೇಟಿ ನೀಡುವುದರ ಮೂಲಕ ಉಚಿತವಾಗಿ ಚಿಕಿತ್ಸೆಯನ್ನು ಪಡೆಯಲು ಅವಕಾಶವನ್ನು ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿ ರೋಟರಿ ಕ್ಲಬ್‌ನ ಎಸ್.ವಿರೇಶ್, ವೀರಭದ್ರಸ್ವಾಮಿ, ವೆಂಕಟೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















