ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 05 : 38 ತಿಂಗಳ ಬಾಕಿ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿಗಳು ನಡೆಸುತ್ತಿರುವ ಮುಷ್ಕರಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಶೋಷಿತರ ವಾದ)ಬೆಂಬಲಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮಂಗಳವಾರ ಮನವಿ ಸಲ್ಲಿಸಿತು.
ರಾಜ್ಯ ಸರ್ಕಾರದ ಐದು ಉಚಿತ ಗ್ಯಾರೆಂಟಿಗಳಲ್ಲಿ ಶಕ್ತಿ ಯೋಜನೆ ಯಶಸ್ವಿಯಾಗಿದೆ ಎಂದರೆ ಅದಕ್ಕೆ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕರು, ನಿರ್ವಾಹಕರು ಹಾಗು ಸಿಬ್ಬಂದಿಗಳ ಪರಿಶ್ರಮವಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಕೂಡಲೆ ಈಡೇರಿಸುವ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗು ಹೊರಗುತ್ತಿಗೆ ನೌಕರರನ್ನು ಕೀಳಾಗಿ ಕಾಣುವುದು ಸರಿಯಲ್ಲ. ನಾನಾ ಸಂಘಟನೆಗಳು ಮುಷ್ಕರಕ್ಕೆ ಬೆಂಬಲಿಸಿ ಪ್ರತಿಭಟಿಸುವ ಮುನ್ನಾ ರಾಜ್ಯ ಸರ್ಕಾರ ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಗಳ ಬೇಡಿಕೆಯನ್ನು ಈಡೇರಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಸಿ.ಹೆಚ್.ಮಂಜುನಾಥ್ ಸರ್ಕಾರವನ್ನು ಒತ್ತಾಯಿಸಿದರು.
ಬಿ.ಟಿ.ಚಿದಾನಂದಮೂರ್ತಿ, ರಂಗಸ್ವಾಮಿ, ಭೀಮಣ್ಣ, ಎನ್.ರಂಗಸ್ವಾಮಿ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಈ ಸಂದರ್ಭದಲ್ಲಿದ್ದರು.


