ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ ಅಂಡ್ ಗ್ಯಾಂಗ್ ನೀಡಿರುವ ಜಾಮೀನು ರದ್ದು ಕೋರಿ ಪೊಲೀಸ್ ಇಲಾಖೆ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಇಂದು ಜಾಮಿನು ರದ್ಧು ಕೋರಿದ ಅರ್ಜಿ ಸಂಬಂಧ ವಾದ ಪ್ರತಿವಾದ ನಡೆದಿದೆ. ಹಾಗಾದ್ರೆ ಎರಡು ಕಡೆಯ ವಕೀಲರು ಕೋರ್ಟ್ ಮುಂದೆ ಇಟ್ಟ ಪಾಯಿಂಟ್ ಏನು ಎಂಬ ಮಾಹಿತಿ ಇಲ್ಲಿದೆ.
ಮೃತ ರೇಣುಕಾಸ್ವಾಮಿ ದರ್ಶನ್ ಅಭಿಮಾನಿಯಾಗಿದ್ದ, ದರ್ಶನ್ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಪವಿತ್ರಾ ಗೌಡಗೆ ಅವಹೇಳನಕಾರಿಯಾಗಿ ಸಂದೇಶಗಳನ್ನ ಕಳುಹಿಸಿದ್ದ. ಇದರಿಂದ ರೇಣುಕಾಸ್ವಾಮಿಯನ್ನು ಅಪಹರಿಸಿ, ಪಟ್ಟಣಗೆರೆಯ ಶೆಡ್ ನಲ್ಲು ಕೊಲೆ ಮಾಡಲಾಯ್ತು. ಇದು ಪೊಲೀಸ್ ತನಿಖೆಯಿಂದ ಬಯಲಾಯ್ತು. ಈ ಪ್ರಕರಣದಲ್ಲಿ A-2 ಆರೋಪಿ ದರ್ಶನ್ ಸಹ ಆರೋಪಿಗಳ ಪ್ರಭಾವದಿಂದ ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆ ಇದೆ. ಪ್ರಕರಣದ ವಿಚಾರಣೆಯನ್ನು ದಿನನಿತ್ಯ ನಡೆಸಲು ಮತ್ತು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅನ್ನು ನೇಮಿಸಲು ಸರ್ಕಾರ ಒಪ್ಪಿಕೊಂಡಿದೆ.
ಇನ್ನು ಜಾಮೀನು ರದ್ದಾಗದಂತೆ ದರ್ಶನ್ ಪರ ವಕೀಲರು ಮನವಿ ಮಾಡಿದ್ದು ಅದಕ್ಕೂ ಒಂದಷ್ಟು ಕಾರಣಗಳನ್ನ ನೀಡಿದ್ದಾರೆ. ದರ್ಶನ್ ಯಾವುದೇ ಜಾಮೀನು ಷರತ್ತುಗಳನ್ನು ಉಲ್ಲಂಘನೆ ಮಾಡಿಲ್ಲ. ಅಪಹರಣದಲ್ಲಿ ದರ್ಶನ್ ಪಾತ್ರದ ಬಗ್ಗೆ ಯಾವುದೇ ಸಾಕ್ಷ್ಯವಿಲ್ಲ. ಅಪಹರಣಕ್ಕೆ ದರ್ಶನ್ ಸೂಚನೆ ನೀಡಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ದರ್ಶನ್ ಎ-3 ನಡುವೆ ಕರೆಗಳು ಅಥವಾ ವಾಟ್ಸಾಪ್ ಸಂದೇಶಗಳ ವಿನಿನಯ ಆಗಿಲ್ಲ. ಮರಣದ ಸಮಯವನ್ನು ಪ್ರಾಸಿಕ್ಯೂಷನ್ ಗೆ ಅನುಗುಣವಾಗಿ ನೀಡಲಾಗಿದೆ. ಈ ಎಲ್ಲಾ ಕಾರಣಗಳನ್ನು ಪರಿಗಣಿಸಿ ಜಾಮೀನನ್ನು ರದ್ದು ಮಾಡಬಾರದು ಎಂದು ದರ್ಶನ್ ಪರ ವಕೀಲರು ಮನವಿ ಮಾಡಿದ್ದಾರೆ.






