ಬೆಂಗಳೂರು: ಇಂದು ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. 22 ಕ್ಯಾರಟ್ ನ ಒಂದು ಗ್ರಾಂಗೆ ನಿನ್ನೆಯಷ್ಟೆ 75 ರೂಪಾಯಿ ಏರಿಕೆಯಾಗಿತ್ತು. ಇಂದು ಮತ್ತೆ 10 ರೂಪಾಯಿ ಏರಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 9,380 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ ಕೂಡ 11 ರೂಪಾಯಿ ಏರಿಕೆಯಾಗಿದ್ದು, ಈ ಮೂಲಕ 10,233 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 93,800 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 1,02,330 ರೂಪಾಯಿ ಆಗಿದೆ.
ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 93,800 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 93,950 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 90,080 ರೂಪಾಯಿ ಇದೆ. ಅಮೆರಿಕಾದಲ್ಲಿ 92,259 ಇದೆ. ಸೌದಿಯಲ್ಲಿ 90,280 ಇದೆ.
ಬೆಳ್ಳಿ ಬೆಲೆಯಲ್ಲಿ ನಿನ್ನೆಯಷ್ಟೇ 2 ರೂಪಾಯಿ ಏರಿಕೆಯಾಗಿತ್ತು. ಇಂದು ಮತ್ತೆ 1 ರೂಪಾಯಿ ಏರಿಕೆಯಾಗಿದ್ದು, ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 116 ರೂಪಾಯಿ ಇದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 11,600 ರೂಪಾಯಿ ಆಗಿದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 11,600 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 12,600 ರೂಪಾಯಿ ಇದೆ.


