ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಆವರಣದಲ್ಲೇ ವ್ಯಕ್ತಿಯೊಬ್ಬರು ನೇಣು ಬಿಗಿದು ಜೀವ ತೆಗೆದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡೆತ್ ನೋಟ್ ಬರೆದಿಟ್ಟಿದ್ದು ಇದರಲ್ಲಿ ಸಂಸದ ಡಾ.ಕೆ.ಸುಧಾಕರ್ ಅವರ ಹೆಸರನ್ನು ಉಲ್ಲೇಖ ಮಾಡಿ ಆರೋಪಿಸಲಾಗಿದೆ. ಹೀಗಾಗಿ ಈ ಸುದ್ದಿ ದೊಡ್ಡ ಮಟ್ಟಕ್ಕೆ ಚರ್ಚೆಯಾಗ್ತಾ ಇದೆ.
ಚಿಕ್ಕಬಳ್ಳಾಪುರ ಸಿಟಿಯ ಬಾಪೂಜಿನಗರ ನಿವಾಸಿ 30 ವರ್ಷದ ಬಾಬು ಎನ್ನುವವರು ನೇಣು ಬಿಗಿದುಕೊಂಡು ಜೀವ ತೆಗೆದುಕೊಂಡವರು. ಇವರು ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿಗೆ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ನನ್ನ ಈ ಸ್ಥಿತಿಗೆ ಮೂವರು ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.
ಡೆತ್ ನೋಟ್ ನಲ್ಲಿ ನಾನು ಜೀವ ತೆಗೆದುಕೊಳ್ಳಲು ಸಂಸದ ಡಾ.ಕೆ.ಸುಧಾಕರ್,ಲೆಕ್ಕ ಪರಿಶೋಧಕ ಮಂಜುನಾಥ್ ಹಾಗೂ ಎನ್ ಎನ್ ಆರ್ ಟ್ರಾವೆಲ್ಸ್ ನಾಗೇಶ್ ಕಾರಣ ಅಂತ ಪತ್ರದಲ್ಲಿ ಉಲ್ಲೇಕಜ ಮಾಡಲಾಗಿದೆ. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ಮೋಸ ಮಾಡಿದ್ದಾರೆ. ಸಂಸದ ಡಾ.ಜೆ.ಸುಧಾಕರ್,ಲೆಕ್ಕ ಪರಿಶೋಧಕ ಮಂಜುನಾಥ್ ಹಾಗೂ ನಾಗೇಶ್ ರಿಂದ ವಂಚನೆ ಆರೋಪ ಮಾಡಲಾಗಿದೆ. 2021ರಲ್ಲಿ ಸರ್ಕಾರಿ ಕೆಲಸ ಕೊಡಿಸುವುದಾಗಿ 40 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ಆಗ ಮುಂಗಡವಾಗಿ 25 ಲಕ್ಷ ಹಣ ಕೊಟ್ಟಿದ್ದೆ. ಆದರೆ ಈಗ ಕೆಲಸಾನು ಇಲ್ಲ ಹಣವೂ ವಾಪಸ್ ಕೊಟ್ಟಿಲ್ಲ ಅಂತ ಮನನೊಂದಿದ್ದ ಬಾಬು ಇದರಿಂದಾನೇ ಜೀವ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.

ಇದೇ ವಿಚಾರಕ್ಕೆ ಮಾತನಾಡಿರುವ ಪ್ರಿಯಾಂಕ್ ಖರ್ಗೆ, ಪಂಚಾಯತಿ ಕಚೇರಿಯಲ್ಲಿ ಆಗಿದ್ರೆ ಮಾಹಿತಿ ಪಡೆದು ಸೂಕ್ತ ಕ್ರಮ ತೆಗೆದುಕೊಳ್ಳಬೇಕೋ ಅದನ್ನ ತಗೋಳ್ತೀವಿ. ಯಾರೂ ಕೂಡ ಕಾನೂನಿಗಿಂತ ದೊಡ್ಡವರಲ್ಲ. ಕಾನೂನಿನ ಪ್ರಕಾರ ನಿರ್ಧಾರ ತೆಗೆದುಕೊಳ್ತೇವೆ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








