Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಒಳಮೀಸಲಾತಿ ಜಾರಿ ಮತ್ತೆ ಮುಂದೂಡಿಕೆ : ಸಚಿವರಲ್ಲಿಯೇ ಒಮ್ಮತದ ಕೊರತೆ..!

---Advertisement---

ಬೆಂಗಳೂರು: ಒಳಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ನಾಗಮೋಹನ್ ದಾಸ್ ವರದಿಯನ್ನ ಸಲ್ಲಿಕೆ ಮಾಡಿದ್ದರು. ಈ ವರದಿ ಇಂದು ಜಾರಿಯಾಗುತ್ತೆ ಅಂತಾನೇ ಎಲ್ಲರು ಭಾವಿಸಿದ್ದರು. ಆದರೆ ಅದಾಗಿಲ್ಲ. ಮತ್ತೆ ವರದಿ ಜಾರಿ ಮುಂದೂಡಿಕೆಯಾಗಿದೆ. ಒಳ ಮೀಸಲಾತಿಯಲ್ಲಿ ನಾವೆಲ್ಲಾ ಒಗ್ಗಟ್ಟಾಗಿರಬೇಕು ಎಂದು ಸಚಿವರು, ಶಾಸಕರು ಒಗ್ಗಟ್ಟಾಗಿದ್ದರು. ಆದರೆ ಅವರಲ್ಲಿಯೇ ಮೂಡದ ಒಮ್ಮತ, ಅವರಲ್ಲಿರುವ ಒಂದಷ್ಟು ಭಿನ್ನಾಭಿಪ್ರಾಯಗಳಿಂದ ವರದಿ ಜಾರಿ ಮುಂದಕ್ಕೆ ಹೋಗಿದೆ.

ಮುಂದಿನ ಅಚಿವ ಸಂಪುಟದಲ್ಲಿ ಒಳ ಮೀಸಲಾತಿ ಜಾರಿ ಕುರಿತು ಮುಂದಿನ ಸಚಿವ ಸಂಪುಟದಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ. ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯಲ್ಲಿ ಒಟ್ಟು 17% ಮೀಸಲಾತಿಯನ್ನ ಐದು ವರ್ಗಗಳಾಗಿ ವಿಂಗಡಣೆ ಮಾಡಿ ಶಿಫಾರಸು ಮಾಡಲಾಗಿತ್ತು. ಪ್ರವರ್ಗ -ಎಯಿಂದ ಪ್ರವರ್ಗ ಇ ವರೆಗೂ ಒಳ ಮೀಸಲಾತಿ ಹಂಚಿಕೆ ಮಾಡಲಾಗಿತ್ತು. ಪ್ರವರ್ಗ ಎ 1% ಒಳ ಮೀಸಲಾತಿ, ಪ್ರವರ್ಗ ಬಿ 6% ಒಳ ಮೀಸಲಾತಿ, ಪ್ರವರ್ಗ ಸಿ 5%, ಪ್ರವರ್ಗ ಡಿ 4% ಒಳ ಮೀಸಲಾತಿ, ಪ್ರವರ್ಗ ಇ 1% ಒಳ ಮೀಸಲಾತಿ, ಪರಿಶಿಷ್ಟ ಎಡ ಸಮುದಾಯಕ್ಕೆ 6% ಒಳ ಮೀಸಲಾತಿ, ಪರಿಶಿಷ್ಟ ಬಲ ಸಮುದಾಯಕ್ಕೆ 5% ಒಳ ಮೀಸಲಾತಿ ಸೇರಿದಂತೆ ಒಟ್ಟು 17% ಮೀಸಲಾತಿ ಪ್ರಮಾಣವನ್ನು ಹಂಚಿಕೆ ಮಾಡಲಾಗಿದೆ.

ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದಿಂದ ಜಾತಿ ಜನಗಣತಿ ನಡೆಸುವ ವಿಚಾರವಾಗಿ ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಕೈಗೊಳ್ಳಲು ಸರ್ಕಾರ ಸಲಹೆ ನೀಡಿದ್ದು, ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಮಾಡಲು ತಂತ್ರಾಂಶದ ಅಭಿವೃದ್ಧಿ ಹಾಗೂ ಉಸ್ತುವಾರಿಯನ್ನು ಇ-ಆಡಳಿತ ಇಲಾಖೆ ಮೂಲಕ ಕೈಗೊಳ್ಳಲು ಸಲಹೆ ನೀಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...