Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿನ್ನ ದರ ಮತ್ತೆ 70 ರೂಪಾಯಿ ಏರಿಕೆ..!

---Advertisement---

ಬೆಂಗಳೂರು: ಇಂದು ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. 22 ಕ್ಯಾರಟ್ ನ ಒಂದು ಗ್ರಾಂಗೆ 70 ರೂಪಾಯಿ ಏರಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 9,470 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ ಕೂಡ 76 ರೂಪಾಯಿ ಏರಿಕೆಯಾಗಿದ್ದು, ಈ ಮೂಲಕ 10,333 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 94,700 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 1,03,310 ರೂಪಾಯಿ ಆಗಿದೆ.

 

ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 94,850 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 94,850 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 90,110 ರೂಪಾಯಿ ಇದೆ. ಅಮೆರಿಕಾದಲ್ಲಿ 92,440 ಇದೆ. ಸೌದಿಯಲ್ಲಿ 90,120 ರೂಪಾಯಿ ಇದೆ.

ಬೆಳ್ಳಿ ಬೆಲೆಯಲ್ಲಿ ಯಾವುಸೇ ವ್ಯತ್ಯಯವಾಗಿಲ್ಲ. ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 116 ರೂಪಾಯಿ ಇದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 11,600 ರೂಪಾಯಿ ಆಗಿದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 11,600 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 12,600 ರೂಪಾಯಿ ಇದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment