ಬೆಂಗಳೂರು: ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಸಂಬಂಧ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ಕೋವಿಡ್-19 ಲಘು ಲಕ್ಷಣಗಳು ಕಾಣಿಸಿದ ಕಾರಣ ನಾನು ಇಂದು ಪರೀಕ್ಷೆಗೆ ಒಳಪಟ್ಟಿದ್ದು, ಕೋವಿಡ್-19 ವರದಿ ಪಾಸಿಟಿವ್ ಬಂದಿದೆ.
ಕ್ವಾರಂಟೈನ್‌ನಲ್ಲಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಓಮಿಕ್ರಾನ್ ಭೀತಿ ಎದುರಾಗಿದೆ. ದಿನೇ ದಿನೇ ಸೋಂಕಿಗೆ ಒಳಗಾಗುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಮೂರನೆ ಅಲೆಯ ಆತಂಕದಿಂದ ರಾಜ್ಯ ಸರ್ಕಾರ ಕೂಡ ಸಾಕಷ್ಟು ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.