Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೈತರಿಗೆ ಗುಡ್ ನ್ಯೂಸ್ : 18 ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ

---Advertisement---

ಬೆಂಗಳೂರು: ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 18 ಕೃಷಿ ಹಾಗೂ ತೋಟಗಾರಿಕ ಉತ್ಪನ್ನಗಳಿಗೆ ರಾಜ್ಯ ಸರ್ಕಾರ ಬೆಂಬಲ ಬೆಲೆ ನೀಡಲು ನಿರ್ಧಾರ ಮಾಡಿದೆ. ಈ ಬಗ್ಗೆ ಕೃಚಿ ಸಚಿವ ಚೆಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ. ರಾಗಿ, ಭತ್ತ, ಜೋಳ, ತೊಗರಿ, ಶೇಂಗಾ, ಹತ್ತಿ ಸೇರಿದಂತೆ ಹದಿನೆಂಟು ಬೆಳೆಗಳಿಗೆ ಸರ್ಕಾರ ಬೆಂಬಲ ಬೆಲೆ ನೀಡಲಿದೆ ಎಂಬ ಮಾಹಿತಿಯನ್ನ ನೀಡಿದರು. ಈ ಸಂಬಂಧ ಸೆಪ್ಟೆಂಬರ್ ನಿಂದ ರಿಜಿಸ್ಟ್ರೇಷನ್ ಆರಂಭವಾಗಲಿದೆ.

ಸರ್ಕಾರದಿಂದ 15 ಲಕ್ಷ ಮೆಟ್ರಿಕ್ ಟನ್ ಉತ್ಪನ್ನವನ್ನು ಕೊಳ್ಳುವುದಕ್ಕೆ ತೀರ್ಮಾನ ಮಾಡಲಾಗಿದೆ. ಅದರಲ್ಲಿ ಆರು ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸಲು ತೀರ್ಮಾನ ಮಾಡಲಾಗಿದೆ. ಎಕರೆಗೆ ಹತ್ತು ಕ್ವಿಂಟಾಲ್ ಗೆ 4886 ರೂಪಾಯಿಗೆ ಖರೀದಿ ಮಾಡಲಾಗುವುದು.‌ ಮೂರು ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿಗೆ ನಿರ್ಧಾರ ಮಾಡಲಾಗಿದೆ. ಕ್ವಿಂಟಾಲ್ ಗೆ 2369 ರೂಪಾಯಿಗೆ ಖರೀದಿ ಮಾಡ್ತೀವಿ. ಪ್ರತಿ ರೈತರಿಂದ ಗರಿಷ್ಠ 25 ಕ್ವಿಂಟಾಲ್ ಖರೀದಿ ಮಾಡಲಾಗುವುದು.‌

ಹಾಗೆಯೇ ಮೂರು ಲಕ್ಷ ಮೆಟ್ರಿಕ್ ಟನ್ ಬಿಳಿ ಜೋಳ ಖರೀದಿಗೆ ನಿರ್ಧಾರ ಮಾಡಲಾಗಿದೆ. ಗರಿಷ್ಠ ಒಬ್ಬ ರೈತರಿಂದ 150 ಕ್ವಿಂಟಾಲ್ ಖರೀದಿ ಮಾಡಲಾಗುವುದು. ಪ್ರತಿ ಕ್ವಿಂಟಾಲ್ ಗೆ 3669 ರೂಪಾಯಿಯಂತೆ ಖರೀದಿಸಲಾಗುವುದು.‌ ಅಷ್ಟೇ ಅಲ್ಲ ಸಿರಿಧಾನ್ಯವನ್ನೂ ಸರ್ಕಾರ ಖರೀದಿ ಮಾಡಲಿದೆ. ನವಣೆ, ಸಾಮೆ, ಹಾರಕ ಸೇರಿದಂತೆ ಮುಂತಾದ ಸಿರಿಧಾನ್ಯವನ್ನು ಖರೀದಿ ಮಾಡಲಿದೆ. ಸಿರಿ ಧಾನ್ಯಗಳು ಕ್ವಿಂಟಲ್ ಗೆ 4886 ರೂಪಾಯಿ ಬೆಂಬಲ ಬೆಲೆ ನೀಡಲಾಗುವುದು. ಇದಕ್ಕೆ 114 ರೂಪಾಯಿ ಉತ್ತೇಜನ ಮೊತ್ತ ಸೇರಿಸಿ ಒಟ್ಟು ಐದು ಸಾವಿರ ಕೊಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಇದು ರೈತರಿಗೆ ಹೆಚ್ಚು ಖುಷಿ ಕೊಟ್ಟ ವಿಚಾರವಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment