Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಯರ 354ನೇ ಆರಾಧನಾ ಮಹೋತ್ಸವ ಆರಂಭ : 7 ದಿನ ಏನೆಲ್ಲಾ ವಿಶೇಷತೆ ಇರಲಿದೆ..?

---Advertisement---

ರಾಯರ ಭಕ್ತ ಬಳಗ ಅಪಾರವಾಗಿದೆ. ಬೇರೆ ಬೇರೆ ರಾಜ್ಯದಿಂದಾನೂ ಮಠಕ್ಕೆ ಬರ್ತಾರೆ. ರಾಯರು ಅಷ್ಟೇ ತಮ್ಮ ಭಕ್ತರನ್ನ ಸದಾ ಕಾಪಾಡುತ್ತಲೇ ಇರುತ್ತಾರೆ. ಅದರಲ್ಲೂ ಆರಾಧನಾ ಮಹೋತ್ಸವಕ್ಕಾಗಿ ಭಕ್ತವೃಂದವೇ ಕಾಯುತ್ತಾ ಇರುತ್ತದೆ. ಅಂಥ ವಿಶೇಷ ದಿನ ಇಂದು ಶುರುವಾಗಿದೆ. ಇಂದಿನಿಂದ 354ನೇ ಆರಾಧನಾ ಮಹೋತ್ಸವ ಶುರುವಾಗಿದ್ದು, ಏಳು ದಿನಗಳ ಕಾಲ ನಡೆಯಲಿದೆ.

ಈ ಏಳು ದಿನಗಳ ಸಪ್ತರಾತ್ರೋತ್ಸವ ನಡೆಯಲಿದೆ. ಇಂದು ಸಂಜೆ ಧ್ವಜಾರೋಹಣ ಮೂಲಕ ಸಪ್ತರಾತ್ರೋತ್ಸವಕ್ಕೆ ಮಠಕ್ಕೆ ಪೀಠಾಧಿಪತಿ ಸುಬುದೇಂದ್ರ ತೀರ್ಥ ಸ್ವಾಮಿಯವರು ಚಾಲನೆ ನೀಡಲಿದ್ದಾರೆ. ಈ ಸಮಯದಲ್ಲಿ ಗೋ, ಗಜ, ಅಶ್ವ, ಧಾನ್ಯ, ಲಕ್ಷ್ಮೀ ಪೂಜೆಯೊಂದಿಗೆ ವಿದ್ಯುಕ್ತ ಚಾಲನೆ ಸಿಗಲಿದೆ. ಆಗಸ್ಟ್ 10ಕ್ಕೆ ಪೂರ್ವಾರಾಧನೆ, ಆಗಸ್ಟ್ 11ಕ್ಕೆ ಮಧ್ಯಾರಾಧನೆ, ಆಗಸ್ಟ್ 12ಕ್ಕೆ ಉತ್ತರಾರಾಧನೆ ನಡೆಯಲಿದೆ.

ತಿರುಮಲ ತಿರುಪತಿ ದೇವಸ್ಥಾನದಿಂದ ಇಂದು ಬರಲಿರುವ ಶ್ರೀನಿವಾಸ ದೇವರ ಶೇಷವಸ್ತ್ರ ರಾಯರ ಮೂಲ ಬೃಂದಾವನಕ್ಕೆ ಸಮರ್ಪಣೆ ಮಾಡಲಾಗುತ್ತದೆ. ಜೊತೆಗೆ ಮಠದ ಆವರಣದಲ್ಲಿ ನಿರ್ಮಾಣಗೊಂಡಿರುವ ಪುಷ್ಕರಣಿ ಆಗಸ್ಟ್ 9ಕ್ಕೆ ಲೋಕಾರ್ಪಣೆಯಾಗಲಿದೆ. ಆಗಸ್ಟ್ 10ರಂದು ಸಾಧಕರಿಗೆ ರಾಘವೇಂದ್ರ ಗುರು ಅನುಗ್ರಹ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಆಗಸ್ಟ್ 12ರಂದು ಬೆಳಗ್ಗೆ 10 ಗಂಟೆಗೆ ಶ್ರೀಮಠದ ಮುಂದಿನ ರಾಜಬೀದಿಯಲ್ಲಿ ಮಹಾರಥೋತ್ಸವ ನಡೆಯಲಿದೆ. ರಾಯರ ಮೂಲ ಬೃಂದಾವನಕ್ಕೆ ನವರತ್ನ ಕವಚ ಸಮರ್ಪಣೆ ಮಾಡಲಾಗುತ್ತಿದೆ. ಆರಾಧನಾ ಮಹೋತ್ಸವದ ಏಳು ದಿನಗಳ ಕಾಲ ಮಂತ್ರಾಲಯ ರಾಯರ ಮಠದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿದೆ.‌ ಈ ಸಮಯದಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಠಕ್ಕೆ ಬರುವ ಕಾರಣ ಬಿಗಿ ಭದ್ರತೆಯನ್ನ ದೇವಸ್ಥಾನದ ಆಡಳಿತ ಒದಗಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment