Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮತಗಳ್ಳತನ ರಾಹುಲ್ ಗಾಂಧಿ ಆರೋಪದಲ್ಲಿ ಸತ್ಯಾಂಶವಿಲ್ಲ : ಕೆ ಅಭಿನಂದನ್

---Advertisement---

ಸುದ್ದಿಒನ್, ಹಿರಿಯೂರು, ಆಗಸ್ಟ್. 09 : ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂದು ಸಂಸದ ರಾಹುಲ್ ಗಾಂಧಿ ಹೇಳುತ್ತಿರುವುದರಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಕೆ ಅಭಿನಂದನ್ ತಿಳಿಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಆರೋಪ ಮಾಡುವಾಗ ದಾಖಲೆಗಳನ್ನು ಇಟ್ಟುಕೊಂಡು ಆರೋಪಿಸಬೇಕು. ಆದರೆ ಕಳೆದ 11 ವರ್ಷಗಳ ಬಿಜೆಪಿ ಆಡಳಿತ ಸಹಿಸಲಾಗದೇ ಇರುವುದರಿಂದ, ಮುಂಬರುವ ಗ್ರಾಪಂ, ತಾಪಂ ಹಾಗೂ ಜಿಪಂ ಚುನಾವಣೆಗೆ ಜನರನ್ನು ಸೆಳೆಯಲು ಈಗಿನಿಂದಲೇ ಪ್ರಚಾರ ಪಡೆಯಲು ಈರೀತಿ ಆರೋಪ ಮಾಡುತ್ತಿದ್ದಾರೆ ಎಂದರು.

2023ರಲ್ಲಿ ರಾಜ್ಯದಲ್ಲಿ ತನ್ನದೇ ಕಾಂಗ್ರೆಸ್ ಸರ್ಕಾರವಿತ್ತು. ಹಾಗಾದ್ರೆ ಮತಗಳ್ಳತನ ನಡೆದಿದೆ ಎನ್ನುವುದಾದರೆ ನಿಮ್ಮ ಅಧಿಕಾರಿಗಳ ವಿರುದ್ಧ ಕ್ರಮ ಏಕಿಲ್ಲ ಎಂದು ಪ್ರಶ್ನಿಸಿದರು.

ಕಾರ್ಯಕ್ರಮ ನಡೆದ ಕೂಗತದ ದೂರದಲ್ಲಿ ಚುನಾವಣಾ ಆಯೋಗ ಕಛೇರಿಯಿತ್ತು. ಕಛೇರಿಗೆ ತೆರಳಿ ಸಹಿ ಮಾಡಿ ಪತ್ರ ಯಾಕೆ ಕೊಡದೇ ಪಲಾಯನ ಮಾಡಿ ಯಾಕೆ ?. ಮತಗಳ್ಳತನ ನಡೆದಿದೆ ಎಂಬ ನಿಮ್ಮ ಆರೋಪವಾದರೆ ಕಲಂ 20/3ಬಿ ಆಕ್ಟ್ ಪ್ರಕಾರ ಚುನಾವಣಾ ಆಯೋಗ ಕ್ರಮ ಕೈಗೊಳ್ಳಲಿದೆ ನೀವು ದಾಖಲೆ ಒದಗಿಸಬೇಕು ಎಂದು ಆಗ್ರಹಿಸಿದರು.

ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರು ಪೋಟೋ ಸಮೇತ ಉತ್ತರ ನೀಡಿದ್ದಾರೆ. ಸಂಸದ ರಾಹುಲ್ ಗಾಂಧಿರವರ ಆರೋಪದಲ್ಲಿ ಯಾವುದೇ ಹುರುಳಿಲ್ಲ. 1975ರಲ್ಲಿ ಅಲಹಾಬಾದ್ ಕ್ಷೇತ್ರದಲ್ಲಿ ಚುನಾವಣೆ ನಡೆದಾಗ ಅಂದಿನ ಪ್ರಧಾನಿ ಇಂದಿರಾಗಾಂಧಿ ಅವರು ಚುನಾವಣೆಯಲ್ಲಿ ಅಕ್ರಮ ಎಸಗಿದ್ದಾರೆ ಎಂದು ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿತ್ತು. ಅಕ್ರಮ ಹಿನ್ನೆಲೆಯಲ್ಲಿ ಸಂಸದರ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೋರ್ಟ್ ಆದೇಶಿಸಿತ್ತು ಆದರೆ ರಾಜೀನಾಮೆ ನೀಡಲಿಲ್ಲ ಯಾಕೆ ಎಂದರು.

ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ಕುಂಠಿತವಾಗಿವೆ. ಕೆಎಸ್ಆರ್ಟಿಸಿ ನೌಕರರು ಸೇರಿದಂತೆ ಹಲವಾರು ಇಲಾಖೆಗಳ ನೌಕರಿಗೆ ಪ್ರತಿ ತಿಂಗಳು ವೇತನ ನೀಡಲು ಆಗುತ್ತಿಲ್ಲ. ರೈತರಿಗೆ ಯೂರಿಯಾ ಗೊಬ್ಬರ ಪೂರೈಕೆ ಮಾಡಲು ಆಗುತ್ತಿಲ್ಲ. ಜನರಿಗೆ ಇನ್ನಿಲ್ಲದ ಆಸೆಗಳನ್ನು ತೋರಿಸಿ ಅಧಿಕಾರಕ್ಕೆ ಬಂದಿರುವ ನಿಮಗೆ ಮತದಾರರು ಉತ್ತರ ನೀಡಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಿತಿನ್ ಗೌಡ , ಎಸ್ಸಿ ಮೋರ್ಚಾ ಅಧ್ಯಕ್ಷ ಮಂಜುನಾಥ್, ಒಬಿಸಿ ಮೋರ್ಚಾ ಅಧ್ಯಕ್ಷ ನರೇಂದ್ರ ಸಿಂಗ್ ಜೋದ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment