Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೈಚಾಚಿದ್ದು ಸಾಕು.. 10 ನಿಮಿಷ ಕಣ್ಣೀರಾಕಿ.. ಮುಂದೆ ಸಾಗಿ : ಸುದೀಪ್

---Advertisement---

ಬೆಂಗಳೂರು: ಇಂದು ವಿಷ್ಣುವರ್ಧನ್ ಅಭಿಮಾನಿಗಳಿಗೆ ತಡೆಯಲಾರದ ನೋವು. ದಶಕದಿಂದಾನೂ ಸ್ಮಾರಕ ನಿರ್ಮಾಣಕ್ಕಾಗಿ ಹೋರಾಡಿದ್ದು ಕಡಿಮೆ ಏನು ಅಲ್ಲ. ಪ್ರತಿವರ್ಷ ಅಭಿವೃದ್ಧಿ ಆಗದೆ ಇರುವ ಸಮಾಧಿ ಬಳಿ ಹೋಗಿ ಪೂಜೆ ಸಲ್ಲಿಸಿ ಬರುತ್ತಿದ್ದರು. ಆದ್ರೀಗ ಸಂಪೂರ್ಣವಾಗಿ ಸಮಾಧಿಯನ್ನ ನೆಲಸಮ ಮಾಡಿದ್ದಾರೆ. ಇದು ನಟ ಸುದೀಪ್ ಅವರ ನೋವಿಗೂ ಕಾರಣವಾಗಿದೆ. ಅಭಿಮಾನಿಗಳಿಗೂ ವಿಡಿಯೋ ಮೂಲಕ ಸಮಾಧಾನ ಮಾಡಿದ್ದಾರೆ.

ವಿಷ್ಣು ಸರ್ ಸಮಾಧಿಯೊಟ್ಟಿಗೆ ಏನು ನಡೆಯಿತೋ ಅದು ನಡೆಯಬಾರದಿತ್ತು. ಇಲ್ಲಿ ಒಂದು ಚೆನ್ನಾಗಿ ಅರ್ಥವಾಗುತ್ತದೆ. ಒಂದೇ ಊರು, ಒಂದೇ ರಾಜ್ಯ, ನಮ್ಮದೇ ಕಲಾವಿದರು. ಆದರೆ ಇಲ್ಲಿ ಒಬ್ಬೊಬ್ಬರಿಗೆ ಒಂದೊಂದು ನ್ಯಾಯ. ನಾವುಗಳು ಓಡಾಡಿದ್ದಾಯ್ತು, ನೀವುಗಳು ಹೋರಾಡಿದ್ದಾಯ್ತು, ಎಲ್ಲರಲ್ಲಿ ಮನವಿ ಮಾಡಿಕೊಂಡಿದ್ದಾಯ್ತು, ದಯವಿಟ್ಟು ಇದನ್ನ ಮಾಡಿಕೊಡಿ, ಸ್ವಲ್ಪ ಕರುಣೆ ತೋರಿಸಿ ಎಂದು ಕೇಳಿಕೊಂಡಿದ್ದಾಯ್ತು. ಅಧಿಕಾರದಲ್ಲಿರುವವರಿಗೆ ಇದು ದೊಡ್ಡ ವಿಷಯ ಆಗಿರಲಿಲ್ಲ. ಅವರ ಸಣ್ಣ ಪ್ರಯತ್ನ ಸಹ ಇಂದು ನಡೆದಿರುವುದನ್ನು ತಡೆಯಬಹುದಿತ್ತು. ಇನ್ನು ಮುಂದೆ ನಾವೂ ಭಿಕ್ಷೆ ಬೇಡಬೇಕಾದ ಅವಶ್ಯಕತೆ ಇಲ್ಲ. ಮಾಡಬೇಕು ಎಂದುಕೊಂಡಿದ್ದರೆ ಇಷ್ಟು ಹೊತ್ತಿಗೆ ಮಾಡಿರುತ್ತಿದ್ದರು. ಆದರೆ ಈವರೆಗೆ ಮಾಡಿಲ್ಲ ಅಂದ್ರೆ ಅರ್ಥ ಮಾಡಿಕೊಳ್ಳಿ. ಯಾರು..? ಏನು..? ಹೇಗೆ ಎತ್ತಿಟ್ಟರು ಎಂಬುದನ್ನು ನಾವೂ ಅರ್ಥ ಮಾಡಿಕೊಳ್ಳಬೇಕಿದೆ. ಈಗ ಅದು ಮುಗಿದು ಹೋದ ಕಥೆ. ಅದನ್ನು ಬದಿಗಿಟ್ಟು, ನಾವು ಮುಂದೆ ಆಗಬೇಕಾದ ಕೆಲಸಗಳ ಬಗ್ಗೆ ಗಮನ ಹರಿಸೋಣಾ. ಎಲ್ಲರಿಗೂ ನೋವಾಗಿದೆ. ಈ ಘಟನೆ ಆಗಬಾರದಿತ್ತು. ರಾತ್ರೋರಾತ್ರಿ ಹೀಗೆ ಮಾಡಿದ್ದು ಹೇಡಿತನವೂ ಹೌದು.

ನೋವಾಗುತ್ತೆ ಆದರೆ ಅದರಿಂದ ನೋವಾಗುತ್ತೆ ಆದರೆ ಅದರಿಂದ ಹೊರಗೆ ಬರಬೇಕಿದೆ. ಹತ್ತು ನಿಮಿಷ ಕಣ್ಣೀರು ಹಾಕಿ 11ನೇ ನಿಮಿಷ ಮುಂದೆ ಏನು ಮಾಡಬೇಕು ಎಂದು ಯೋಚಿಸಿ ಮುಂದೆ ಹೋಗುವುದು ನನ್ನ ಅಭ್ಯಾಸ. ನೀವೂ ಅದನ್ನೇ ಮಾಡುತ್ತೀರಿ ಎಂದು ಆಶಿಸುತ್ತೇನೆ. ಕೈ ಚಾಚಿದ್ದು ಸಾಕು. ಮುಂದೆ ಏನು ಮಾಡಬೇಕು ಅದನ್ನ ಮಾಡೋಣಾ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment