ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 12 : ಸಾಹಸ ಸಿಂಹ ಡಾ.ವಿಷ್ಣುವರ್ಧನ್‍ರವರ ಸಮಾಧಿಯನ್ನು ರಾತ್ರೋ ರಾತ್ರಿ ನೆಲಸಮಗೊಳಿಸಿರುವವರನ್ನು ಪತ್ತೆ ಹಚ್ಚಿ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ನಗರಸಭೆ ಮಾಜಿ ಉಪಾಧ್ಯಕ್ಷ ಬಿ.ರಾಮಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಾಗರಹಾವು ಚಿತ್ರದ ಮೂಲಕ ಐತಿಹಾಸಿಕ ಚಿತ್ರದುರ್ಗದ ಕೋಟೆಯನ್ನು ನಾಡಿನಾದ್ಯಂತ ಪರಿಚಯಿಸಿ ಅಭಿಮಾನಿಗಳ ಮನದಲ್ಲಿ ಇಂದಿಗೂ ಅಜರಾಮರವಾಗಿ ಉಳಿದಿರುವ ಮೇರು ನಟ ಡಾ.ವಿಷ್ಣುವರ್ಧನ್‍ರವರ ಸಮಾಧಿಯನ್ನು ನೆಲಸಮಗೊಳಿಸಿರುವುದರ ಹಿಂದೆ ಯಾರ ಪಿತೂರಿಯಿದೆ ಎನ್ನುವುದನ್ನು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಅಮೋಘವಾದ ಅಭಿನಯದ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತಿದ್ದ ಡಾ.ವಿಷ್ಣುವರ್ಧನ್‍ರವರ ಅಂತ್ಯಕ್ರಿಯೆನ್ನು ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ನೆರವೇರಿಸಲಾಗಿತ್ತು. ಅಂದಿನಿಂದ ಇಲ್ಲಿಯವರೆಗೂ ಅಭಿಮಾನಿಗಳು ಸಮಾಧಿಗೆ ಪೂಜೆ ಸಲ್ಲಿಸಿಕೊಂಡು ಬರುತ್ತಿದ್ದರು. ಈಗ ಏಕಾಏಕಿ ಸಮಾಧಿಯನ್ನು ಧ್ವಂಸಗೊಳಿಸಿರುವುದು ತರವಲ್ಲ. ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸಮಾಧಿಯನ್ನು ಪುನರ್ ನಿರ್ಮಿಸಿ ಆ ಜಾಗದಲ್ಲಿ ಸ್ಮಾರಕ ನಿರ್ಮಾಣ ಮಾಡಿ ಅಭಿಮಾನಿಗಳ ಆತಂಕವನ್ನು ದೂರ ಮಾಡಬೇಕೆಂದು ಬಿ.ರಾಮಪ್ಪ ಆಗ್ರಹಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















