Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಧಾರಾಕಾರ ಮಳೆಯ ಅಲರ್ಟ್ : ಎಲ್ಲೆಲ್ಲಿ..?

---Advertisement---

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಆಗಸ್ಟ್ 16ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಕರ್ನಾಟಕದ ಹಲವು ಭಾಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ವರದಿ ಮಾಡಿದೆ.

ಆಗಸ್ಟ್ 16 ರವರೆಗೂ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗೆ ಆಗಸ್ಟ್ 16ಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ ಜಿಲ್ಲೆಗಳ ಹಲವು ಕಡೆ ಭಾರಿ ಮಳೆ ಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಆಗಸ್ಟ್ 13 ರಿಂದ ಆಗಸ್ಟ್ 16ರ ತನಕ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಚಿತ್ರದುರ್ಗ, ದಾವಣಗೆರೆ, ಹಾಸನ, ತುಮಕೂರು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಹಾಗೇ ದಕ್ಷಿಣ ಒಳನಾಡು ಕರ್ನಾಟಕದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧ್ಯತೆ ಇದೆ. ಸದ್ಯ ಮಳೆಯ ಚೆನ್ನಾಗಿ ಬಂದರೆ ಸಾಕು ಎನ್ನುವ ರೈತರಿಗೆ ಈ ವರದಿ ಖುಷಿ ಕೊಟ್ಟಿದೆ. ಈಗಾಗಲೇ ಬೀಜ ಬಿತ್ತನೆ ಮಾಡಿದ ರೈತರಿಗೆ ಮಳೆ ಚೆನ್ನಾಗಿ ಬಂದರೆ ಸಾಕು ಎನ್ನುತ್ತಿದ್ದಾರೆ. ಕೆಲವೊಂದು ಕಡೆ ಈಗಾಗಲೇ ಮೊಳಕೆಯೊಡೆದಿದ್ದು, ಪೈರು ಚೆನ್ನಾಗಿ ಬರಬೇಕು ಅಂದರೆ ಮಳೆಯಾಗಬೇಕು ಎಂದು ಪ್ರಾರ್ಥಿಸುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment