Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹರ್-ಘರ್ ತಿರಂಗ ಅಭಿಯಾನ : ರಾಷ್ಟ್ರಧ್ವಜಗಳ ವಿತರಣೆ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಆ.13 : 79 ನೇ ಸ್ವಾತಂತ್ರ್ಯ ದಿನೋತ್ಸವವನ್ನು ಸಂಭ್ರಮಿಸಲು ದೇಶಾದ್ಯಂತ ನಡೆಯುತ್ತಿರುವ ‘ಹರ್-ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಚಿತ್ರದುರ್ಗ ನಗರದಲ್ಲಿಯೂ ಸಹಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಮನೆ-ಮನೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ಗೌರವ ಸಲ್ಲಿಸಬೇಕಿದೆ. ಈ ಹಿನ್ನಲೆಯಲ್ಲಿ ಇಂದಿನಿಂದ ಆಗಸ್ಟ್ 15 ರವರೆಗೂ ಪ್ರತಿ ಮನೆ ಮನೆಗಳ ಮೇಲೆ ರಾಷ್ಟ್ರ ಧ್ವಜ ರಾರಾಜಿಸಬೇಕಿದೆ. ಇದರಿಂದ  ಭಾರತದ ಹಿರಿಮೆ ವಿಶ್ವ ಭೂಪಟದಲ್ಲಿ ಮಿನುಗಬೇಕಿದೆ.

ಇಂದು ಚಿತ್ರದುರ್ಗದ ಪತ್ರಿಕಾ ಭವನದಲ್ಲಿ ಹರ್-ಘರ್ ತಿರಂಗ ಅಭಿಯಾನದ ಅಂಗವಾಗಿ ಬಿಜೆಪಿ ಮಾಧ್ಯಮ ವಿಭಾಗದಿಂದ ಪತ್ರಕರ್ತರಿಗೆ, ವಕೀಲರಿಗೆ ಹಾಗೂ ಕಾಲೇಜುಗಳಿಗೆ 79ನೇ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಸುಮಾರು 250ಕ್ಕೂ ಹೆಚ್ಚು ರಾಷ್ಟ್ರಧ್ವಜಗಳನ್ನು ವಿತರಿಸಲಾಗಿತ್ತು.

ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷರಾದ ದಿನೇಶ್ ಗೌಡಗೆರೆ, ಬಿಜೆಪಿ ಜಿಲ್ಲಾಧ್ಯಕ್ಷರಾದ ಕೆ.ಟಿ. ಕುಮಾರಸ್ವಾಮಿ ಜಿ.ಪಂ.ಮಾಜಿ ಅಧ್ಯಕ್ಷರಾದ ಮಹಾಲಿಂಗಪ್ಪ, ಬಿಜೆಪಿ ಮಾಧ್ಯಮ ವಕ್ತರಾರದ ನಾಗರಾಜ್ ಬೇದ್ರೇ,ದಗ್ಗೆ ಶಿವಪ್ರಕಾಶ್, ಕಾರ್ಯಾದ್ಯಕ್ಷರಾದ ರವಿಕುಮಾರ್, ಕಿರಣ, ಯಶವಂತ ಪರಶುರಾಮ್, ನ್ಯಾಯಾ ವಾದಿಗಳಾದ ರಜಿನಿ, ಶಿವು, ಸಚಿನ್ ಬಾಬು, ಕೀರ್ತಿ ಮಂಜುಳ ಪತ್ರಕರ್ತರು ಸೇರಿದಂತೆ ಇತರರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...