Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಮನೆ ಕಳ್ಳತನ : ಆರೋಪಿಗೆ 2 ವರ್ಷ ಜೈಲು ಶಿಕ್ಷೆ

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 14 : ನಗರದ ಕೆಳಗೋಟೆ ಸಿ.ಕೆ.ಪುರ ಬಡಾವಣೆಯ ವಾಸಿ ಸಂತೋಷ್ ಅವರ ಮನೆಯಲ್ಲಿ 2020 ರಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಜೆಎಂ ನ್ಯಾಯಾಲಯವು ಆರೋಪಿ
ಉಮಾಶಂಕರರೆಡ್ಡಿ (34 ವರ್ಷ) ಎಂಬಾತನಿಗೆ 02 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 3000/-ರೂ.ದಂಡ ವಿಧಿಸಿ ಆದೇಶಿಸಿದೆ.

ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ
ಕೊಟಂಪಲ್ಲಿ ಗ್ರಾಮದ ಉಮಾಶಂಕರರೆಡ್ಡಿ ನಗರದ ಸಂತೋಷ್ ಅವರ ಮನೆಗೆ ಬೀಗ ಹಾಕಿಕೊಂಡು ಹೋದ
ಸಮಯದಲ್ಲಿ ದಿನಾಂಕ: 29/12/2020 ರಂದು ರಾತ್ರಿವೇಳೆ ಮನೆಯ ಮುಂಬಾಗಿಲ ಬೀಗ ಮುರಿದು ಒಳಗೆ ಪ್ರವೇಶಿಸಿ ಮನೆಯಲ್ಲಿದ್ದ 55 ಗ್ರಾಂ ತೂಕದ ಅಂದಾಜು 2,20,000/-ರೂ ಬೆಲೆ ಬಾಳುವ ವಿವಿಧ ರೀತಿಯ ಬಂಗಾರದ ಆಭರಣಗಳು ಹಾಗೂ 7000/- ರೂಪಾಯಿ ನಗದು ಹಣವನ್ನು ಕಳವು ಮಾಡಿದ್ದನು. ಈ ಬಗ್ಗೆ ಬಡಾವಣೆ ಪೊಲೀಸ್
ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಡಾವಣೆ ಪೊಲೀಸ್
ಠಾಣೆಯ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ, ಕಳುವಾದ ಆಭರಣಗಳನ್ನು ವಶಪಡಿಸಿಕೊಂಡು ತನಿಖೆ ಪೂರೈಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಸಿಜೆಎಂ ನ್ಯಾಯಾಲಯವು ಇಂದು (ಆಗಸ್ಟ್. 14 ರಂದು) ಆರೋಪಿ ಉಮಾಶಂಕರರೆಡ್ಡಿ ಅಪರಾಧಿಯೆಂದು ಘೋಷಿಸಿ, 02 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 3000/-ರೂ.ದಂಡ ವಿಧಿಸಿದೆ.
ಈ ಪ್ರಕರಣದಲ್ಲಿ ಪಾಲ್ಗೊಂಡ ಬಡಾವಣೆ ಠಾಣೆಯ ಪೊಲೀಸರ ಕಾರ್ಯಕ್ಕೆ ಚಿತ್ರದುರ್ಗ ಜಿಲ್ಲೆಯ ಪೊಲೀಸ್ ಅಧೀಕ್ಷಕರವರು ಶ್ಲಾಘನೆಯನ್ನು ವ್ಯಕ್ತಪಡಿಸಿರುತ್ತಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment