ಬೆಂಗಳೂರು: ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಎಲ್ಲೆಲ್ಲೂ ಮನೆ ಮಾಡಿದೆ. ಮಾಣಿಕ್ ಶಾ ಪರೇಡ್ ಗ್ರೌಂಡ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣಾ ನೆರವೇರಿಸಿ, ತೆರೆದ ಜೀಪ್ ನಲ್ಲಿ ಪರೇಡ್ ವೀಕ್ಷಣೆ ಮಾಡಿದರು. ಜೊತೆಗೆ ಗೌರವ ರಕ್ಷೆ ಸ್ವೀಕಾರ ಮಾಡಿದರು. ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು, ಸ್ವಾತಂತ್ರ್ಯ ಹೋರಾಟಗಾರರು ಕೂಡ ಭಾಗಿಯಾಗಿದ್ದರು.
ಶಾಲಾ ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು ನೆರವೇರಿದವು. ಈ ಅದ್ದೂರಿ ಕಾರ್ಯಕ್ರಮದಲ್ಕಿ ಸುಮಾರು 8 ಸಾವಿರ ಮಂದಿ ಕುಳಿತುಕೊಳ್ಳುವುದಕ್ಕೆ ಆಸನದ ವ್ಯವಸ್ಥೆ ಮಾಡಲಾಗಿತ್ತು. ವಿವಿಧ ಇಲಾಖೆಯಿಂದ ಪಥ ಸಂಚಲನ ಕೂಡ ನಡೆದಿದೆಮ ಅಷ್ಟೇ ಅಲ್ಲ ಕರ್ನಾಟಕ ಪೊಲೀಸ್ ಸಮೂಹ ವಾದ್ಯಮೇಳದ 253 ಅಧಿಕಾರಿ, ಸಿಬ್ಬಂದಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದೆ.
ಕಾರ್ಯಕ್ರಮದಲ್ಲಿ ಗಣ್ಯಾತೀಗಣ್ಯರು ಭಾಗಿಯಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಅನ್ನು ಮಾಡಲಾಗಿತ್ತು. ಸಂಚಾರ ನಿರ್ವಹಣೆ ಹಾಗೂ ಆಚರಣೆಗೆ ಆಗಮಿಸುವ ಗಣ್ಯರು ಮತ್ತು ಸಾರ್ವಜನಿಕರಿಗೆ ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿತ್ತು. ಭದ್ರತೆಗಾಗಿ ಡಿಸಿಪಿ, ಎಸಿಪಿ, ಪೊಲೀಸ್ ಅಧಿಕಾರಿಗಳು, ಪಿಎಸ್ಐ, ಎಎಸ್ಐ, ಪಿಸಿ, ಮಹಿಳಾ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಮೈದಾನ ಸುತ್ತ ಭದ್ರತೆ ಮತ್ತು ಸುರಕ್ಷತೆಗಾಗಿ ಹೆಚ್ಚುವರಿ 1000p ಸಿಸಿ ಕ್ಯಾಮೆರಾಪ ವ್ಯವಸ್ಥೆ, ಬ್ಯಾಗೇಜ್ ಸ್ಕ್ಯಾನರ್, ಕೆಎಸ್‌ಆರ್‌ಪಿ ಮತ್ತು ಸಿಆರ್‌ತುಕಡಿ, ಎರಡು ಅಗ್ನಿಶಾಮಕ ವಾಹನ, ಎರಡು ಆ್ಯಂಬುಲೆನ್ಸ್ ವಾಹನ, ಕ್ಷಿಪ್ರ ಕಾರ್ಯಾಚರಣೆ ಪಡೆ, ಬಾಂಬ್ ನಿಷ್ಕ್ರಿಯ ದಳ ತಂಡದ ನಿಯೋಜನೆ ಮಾಡಲಾಗಿತ್ತು. ಈ ಮೂಲಕ 79ನೇ ಸ್ವಾತಂತ್ರ್ಯ ದಿನಾಚರಣೆ ಅದ್ದೂರಿಯಾಗಿ ನೆರವೇರಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















