Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಧರ್ಮಸ್ಥಳ ಪ್ರಕರಣದ ಬಗ್ಗೆ ನಾನು ಪ್ರಯಿಕ್ರಿಯಿಸಲ್ಲ : ಮಧು ಬಂಗಾರಪ್ಪ

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 16 : ಧರ್ಮಸ್ಥಳದಲ್ಲಿ ಅನಾಮಧೇಯ ವ್ಯಕ್ತಿ ಹೇಳಿದ್ದನ್ನ ಕೇಳಿ ಸರ್ಕಾರ ಎಸ್ಐಟಿಯನ್ನ ರಚನೆ ಮಾಡಿದೆ. ಆದರೆ ತನಿಖೆಯ ವೇಳೆ ಅಲ್ಲಿ ಏನು ಸಿಕ್ತಿಲ್ಲ. ಹೀಗಾಗಿ ಈ ಬಗ್ಗೆ ಬಿಜೆಪಿ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ.

 

ಹಿರಿಯೂರು ತಾಲ್ಲೂಕು ತಾಳವಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಹಾಗೂ ನೂತನ ಶಾಲಾ ಕೊಠಡಿ ಉದ್ಘಾಟನೆ ನೆರವೇರಿಸಿದ ನಂತರ ಮಾಧ್ಯಮದವರೊಂಗಿಗೆ ಅವರು ಮಾತನಾಡಿದರು.

ಧರ್ಮಸ್ಥಳ ಪ್ರಕರಣದ ಬಗ್ಗೆ ನಾನು ಪ್ರಯಿಕ್ರಿಯಿಸಲ್ಲ. ಕಾನೂನು ಬೇಗ ತೀರ್ಮಾನ ಮಾಡಿ ಪ್ರಕರಣ ಇತ್ಯರ್ಥ ಆಗಲಿ. ಧರ್ಮಸ್ಥಳ, ವಿರೇಂದ್ರ ಹೆಗ್ಗಡೆ ಅವರ ಮೇಲೆ ಗೌರವವಿದೆ ಎಂದಿದ್ದಾರೆ.

ಬಿಜೆಪಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಆಪರೇಷನ್ ಸಿಂದೂರ್ ನಲ್ಲಿ ಹೆಣ್ಣು ಮಕ್ಕಳು ಅನಾಥರಾಗಿದ್ದಾರೆ. ಯಾಕೆ ಅನಥರಾದರು ಎಂದು ಬಿಜೆಪಿಯವರು ನೋಡಲಿ. ಸಿಂದೂರ್ ಅಂತ ಹೆಸರಿಟ್ಟು ಎಲ್ಲಾ ಸಾವು ಆದ್ಮೇಲೆ ಬಂದು ಭಾಷಣ ಮಾಡ್ತಾರೆ. ಬಿಜೆಪಿಗೆ ಮಾನ ಮರ್ಯಾದೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಲ್ಲಾ ಆದ ಬಳಿಕ ಬಿಜೆಪಿಯವರು ಭಾಷಣ ಮಾಡಿ ಬೆಂಕಿ ಹಚ್ಚುವ ಕೆಲಸ ಆಗ್ತಿದೆ. ಯಾಕೆ ಪ್ರಕರಣ ನಡೆಯಿತೆಂದು ಯಾವನಾದ್ರೂ ಬಿಜೆಪಿಯವನು ಮಾತಾಡಿದ್ದಾನಾ.. ಬಿಜೆಪಿಯವರಿಗೆ ಕಾಮನ್ ಸೆನ್ಸ್ ಇದೆಯಾ. ಘಟನೆ ನಡೆದ ವೇಳೆ ಪೆಹಲ್ಗಾಮ್ ನಲ್ಲಿ ಒಬ್ಬರೂ ಪೊಲೀಸ್ ಇರಲಿಲ್ಲ. ಬಿಜೆಪಿಯವರ ಅಕ್ಕ ತಂಗಿಯರಿಗೆ ಅದೇ ಗತಿ ಆಗಿದ್ದರೆ? ಸಾವು ಆದ್ಮೇಲೆ ಬಿಜೆಪಿಯವರು ಸಂಭ್ರಮಿಸುತ್ತಾರೆ. ಇನ್ಮೇಲೆ ಹಿಂದೆ ಮುಂದೆ ನೋಡದೆ ಖಂಡನೆ ಮಾಡಬೇಕು. ಮತಗಳವು, ಸಾವಲ್ಲಿ ಸಂಭ್ರಮ ಇದೆಲ್ಲಾ ನೀಚಬುದ್ಧಿ ತೋರಿಸುತ್ತಾರೆ ಎಂದು ಬಿಜೆಪಿ ನಾಯಕರ ಮೇಲೆ ಆಕ್ರೋಶ ಹೊರ ಹಾಕಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment