Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ

---Advertisement---

 

 

ಚಿತ್ರದುರ್ಗ. ಆಗಸ್ಟ್.16: ಚಳ್ಳಕೆರೆ ಶಿಶು ಅಭಿವೃದ್ಧಿ ಯೋಜನೆ ಕಚೇರಿ ವ್ಯಾಪ್ತಿಯಲ್ಲಿ ಖಾಲಿ ಇರುವ 2 ಅಂಗನವಾಡಿ ಕಾರ್ಯಕರ್ತೆ, 24 ಸಹಾಯಕಿರು ಸೇರಿ 26 ಹುದ್ದೆಗಳನ್ನು ಗೌರವ ಸೇವೆಯ ಆಧಾರದಲ್ಲಿ ನೇಮಕಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ದ್ವೀತಿಯ ಪಿಯುಸಿ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. 19 ರಿಂದ 35 ವರ್ಷದೊಳಗಿನ ಸ್ಥಳೀಯ ಮಹಿಳಾ ಅಥವಾ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಸೆಪ್ಟೆಂಬರ್ 5 ಸಂಜೆ 5:30ರ ಒಳಗಾಗಿ ವೆಬ್‍ಸೈಟ್ https://karnemakaone.kar.inc.in/abcd/    ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಬಳಕೆದಾರರ ಕೈಪಿಡಿಯಲ್ಲಿನ ಸೂಚನೆಗಳನ್ನು ಸ್ಪಷ್ಟಾವಾಗಿ ಓದಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಚಳ್ಳಕೆರೆ ನಗರದ ಚಿತ್ರದುರ್ಗ ರಸ್ತೆಯಲ್ಲಿನ ತ್ಯಾಗರಾಜ ನಗರದ ಎಸ್.ಬಿ.ಐ.ಬ್ಯಾಂಕ್ ಪಕ್ಕದಲ್ಲಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment