Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜವಾಹರ್ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

---Advertisement---

ಚಿತ್ರದುರ್ಗ. ಆಗಸ್ಟ್. 16: ಹಿರಿಯೂರು ತಾಲ್ಲೂಕಿನ ಉಡುವಳ್ಳಿ ಗ್ರಾಮದ ಜವಾಹರ್ ನವೋದಯ ವಿದ್ಯಾಲಯದಲ್ಲಿ ಪ್ರಶಕ್ತ ಸಾಲಿಗೆ 6ನೇ ತರಗತಿಯ ಪ್ರವೇಶಾತಿಗೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಇದೇ ಆಗಸ್ಟ್ 27 ಕೊನೆಯ ದಿನವಾಗಿದೆ.

ಆವಾಹರ್ ನವೋದಯ ವಿದ್ಯಾಲಯದ ಆಡಳಿತಾತ್ಮಕ ಕಾರಣಗಳಿಂದ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 27ರ ಅವಧಿವರೆಗೆ ವಿಸ್ತರಿಸಿದ್ದು,
ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಉಚಿತವಾಗಿ ನವೋದಯ ವಿದ್ಯಾಲಯ ಸಮಿತಿಯ ವೆಬ್‍ಸೈಟ್ https://cbseitms.rcil.gov.in./nvs/index/registration  ನಲ್ಲಿ ಸಲ್ಲಿಸಬಹುದು ಎಂದು ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ :

ಚಿತ್ರದುರ್ಗ ಜವಾಹರ ನವೋದಯ ವಿದ್ಯಾಲಯದಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಖಾಲಿ ಇರುವ ಸೀಟುಗಳ ಪೈಕಿ 11ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಅವಧಿಯನ್ನು ಆಗಸ್ಟ್ 20 ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ  www.navodaya.gov.in ವೆಬ್‍ಸೈಟ್‍ಗೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment