Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲೆಯಾದ್ಯಂತ ನಿರಂತರ ಮಳೆ : ಇಂದು ಶಾಲೆಗಳಿಗೆ ರಜೆ ಘೋಷಣೆ

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 18 : ರಾಜ್ಯದಲ್ಲಿ ಬೆಂಬಿಡದೆ ಮಳೆ ಸುರಿಯುತ್ತಿದೆ. ಬೆಳಗ್ಗೆಯಿಂದ ಕೂಡ ಜಿಟಿಜಿಟಿ ಮಳೆಯಾಗುತ್ತಿದ್ದು, ಚಿತ್ರದುರ್ಗದಲ್ಲಿ ಶಾಲಾ ಮಕ್ಕಳಿಗೆ ರಜೆ ಘೋಷಣೆ ಮಾಡಲಾಗಿದೆ. ಒಂದೇ ಸಮನೆ ಸುರಿಯುತ್ತಿರುವ ಮಳೆಯಿಂದಾಗಿ ಮಕ್ಕಳು ಶಾಲೆಗೆ ಹೋಗುವುದಕ್ಕೆ ಕಷ್ಟಕರವಾಗಿತ್ತು. ಹೀಗಾಗಿ ಚಿತ್ರದುರ್ಗ ಅಪರ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಡಿಡಿಪಿಐ ರಜೆ ಘೋಷಣೆ ಮಾಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆ ಹಿತದೃಷ್ಟಿಯಿಂದ ಚಿತ್ರದುರ್ಗ ಜಿಲ್ಲೆಯ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಇಂದು ( ದಿನಾಂಕ:18.08.2025ರಂದು) ರಜೆ ನೀಡಲು ಉಲ್ಲೇಖದನ್ವಯ ಮಾನ್ಯ ಅಪರ ಜಿಲ್ಲಾಧಿಕಾರಿಗಳು ಸೂಚನೆ ನೀಡಿರುತ್ತಾರೆ.

ಈ ರಜಾ ಅವಧಿಯ ತರಗತಿಗಳನ್ನು 23.08.2025 ಮತ್ತು 3.08.2025ರ ಶನಿವಾರಗಳಂದು ಪೂರ್ಣದಿನದ ಅವಧಿಯ ತರಗತಿಗಳನ್ನು ನಡೆಸುವ ಮೂಲಕ ಸರಿದೂಗಿಸಲು ಸೂಚಿಸಿದೆ ಎಂದು ಆದೇಶವನ್ನು ಹೊರಡಿಸಲಾಗಿದೆ.

ಸದ್ಯ ಕೋಟೆನಾಡಿನ ಮಂದಿ ಬೆಳಗ್ಗೆಯಿಂದ ಮಳೆ ಸುರಿಯುತ್ತಿರುವುದನ್ನ ಕಂಡು, ಮಕ್ಕಳನ್ನ ಹೇಗಪ್ಪ ಶಾಲೆಗೆ ಕಳುಹಿಸುವುದು ಎಂಬ ಚಿಂತೆಯಲ್ಲಿದ್ದರು. ಸದ್ಯ ಸುರಕ್ಷತೆಯ ದೃಷ್ಟಿಯಿಂದ ಡಿಡಿಪಿಐ ಈ ಒಂದು ನಿರ್ಧಾರವನ್ನು ಕೈಗೊಂಡಿದ್ದಾರೆ. ಇಂದು ಚಿತ್ರದುರ್ಗದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment