Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ವರ್ಷಿತಾ ಹತ್ಯೆ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 21 : ದಲಿತ ಕೋಮಿಗೆ ಸೇರಿದ ಹತ್ತೊಂಬತ್ತು ವರ್ಷದ ವಿದ್ಯಾರ್ಥಿನಿ ವರ್ಷಿತಾಳನ್ನು ಕೊಲೆಗೈದು ಸುಟ್ಟುಹಾಕಿರುವುದನ್ನು ವಿರೋಧಿಸಿ ಎಬಿವಿಪಿ, ವಿವಿಧ ಸಂಘಟನೆಗಳು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದವು.


ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ವರ್ಷಿತಾಳ ಬರ್ಬರ ಹತ್ಯೆಗೆ ಸಂಬಂಧಿಸಿದಂತೆ ಕೆಳಗೋಟೆಯ ಚೇತನ್‍ಕುಮಾರ್ ಎಂಬುವನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಹತ್ಯೆಗೀಡಾಗಿರುವ ವರ್ಷಿತಾಳ ಪೋಷಕರು ಹಾಗೂ ಕೋವೇರಹಟ್ಟಿ ಗ್ರಾಮಸ್ಥರು, ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಸಮೀಪ ಎರಡು ಗಂಟೆಗಳಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ್ದರಿಂದ ಒನಕೆ ಓಬವ್ವ ವೃತ್ತ, ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹಾಗೂ ರೋಟರಿ ಶಾಲೆಯ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅಡಚನೆಯುಂಟಾಯಿತು.

ಕರುನಾಡ ವಿಜಯಸೇನೆ, ಭಾರತೀಯ ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿ, ಅಂಬೇಡ್ಕರ್ ಸೇವಾ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಹತ್ಯೆಯ ಹಿಂದೆ ಯಾರ್ಯಾರ ಕೈವಾಡವಿದೆ ಎನ್ನುವುದನ್ನು ಪತ್ತೆ ಹಚ್ಚಿ ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು.

ಭಾರತೀಯ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ್ ಬೀರಾವರ ಮಾತನಾಡಿ ಹತ್ಯೆಗೀಡಾದ ವಿದ್ಯಾರ್ಥಿನಿ ಕುಟುಂಬಕ್ಕೆ ಒಂದು ಕೋಟಿ ರೂ.ಪರಿಹಾರ ಘೋಷಿಸಿ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ಕೊಡಬೇಕು. ಬರ್ಬರವಾಗಿ ಹತ್ಯೆಗೈದರನ್ನು ಗಲ್ಲು ಶಿಕ್ಷೆಗೊಳಪಡಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.

ಒನಕೆ ಓಬವ್ವ ವೃತ್ತ ಹಾಗೂ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬಿಗಿ ಪೊಲೀಸ್ ಭದ್ರತೆಯಿತ್ತು. ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಸೇರಿದಂತೆ ವಿವಿಧ ಸಂಘಟನೆಗಳು ಪ್ರಮುಖರು ಪ್ರತಿಭಟನೆಯಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment