Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಪಿ.ಓ.ಪಿ ವಿಗ್ರಹಗಳ ಮಾರಾಟ ನಿಷೇಧ ; ಪರಿಸರ ಸ್ನೇಹಿ ಗಣೇಶ ಉತ್ಸವ ಆಚರಣೆಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕರೆ

---Advertisement---

 

ಚಿತ್ರದುರ್ಗ. ಆಗಸ್ಟ್. 20 : ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿ ಅಧಿಸೂಚನೆ ಹಾಗೂ ಸರ್ಕಾರದ ಆದೇಶದಂತೆ ಪಿ.ಓ.ಪಿ (ಪ್ಲಾಸ್ಟರ್ ಆಫ್ ಪ್ಯಾರಿಸ್) ಹಾಗೂ ಭಾರಲೋಹ ಮಿಶ್ರಿತ ರಾಸಯನಿಕ ಬಣ್ಣದಿಂದ ತಯಾರಿಸಿದ ಗಣೇಶ ವಿಗ್ರಹಗಳ ಉತ್ಪಾದನೆ ಹಾಗೂ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಸಾರ್ವಜನಿಕರು ಪಿ.ಒ.ಪಿ ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ, ಪೂಜೆಯ ನಂತರ ಕೆರೆ,ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದರಿಂದ, ಜಲಮೂಲಗಳು ಕಲುಷಿತಗೊಳ್ಳುತ್ತವೆ. ನೀರಿನ ಭೌತಿಕ ಹಾಗೂ ರಾಸಾಯನಿಕ ಗುಣಗಳು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಪ್ರಾಣಿ, ಪಕ್ಷಿ, ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಸಾರ್ವಜನಿಕ ಆರೋಗ್ಯಕ್ಕೂ ದಕ್ಕೆ ಉಂಟಾಗುತ್ತದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರು ಪರಿಸರ ಸ್ನೇಹಿಯಾಗಿ ಗಣೇಶ ಉತ್ಸವ ಆಚರಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕರೆ ನೀಡಿದ್ದಾರೆ.

ಗೌರಿಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣ ರಹಿತ ಮಣ್ಣಿನ ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ, ನಂತರ ಗೌರಿ ಗಣೇಶ ಮೂರ್ತಿಗಳನ್ನು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ನಿಗಧಿಪಡಿಸಿರುವ ಸ್ಥಳಗಳಲ್ಲಿ ವಿಸರ್ಜಿಸಬೇಕು. ವಿಸರ್ಜಿಸುವ ಮುನ್ನ ಹೂ, ಹಣ್ಣು, ಬಾಳೆ ಕಂಬ, ಮಾವಿನ ತೋರಣ ಸೇರಿದಂತೆ ಇತ್ಯಾದಿ ಹಸಿ ಕಸ ಹಾಗೂ ಅಲಂಕಾರಿಕ ವಸ್ತುಗಳು ಪ್ರತ್ಯೇಕಿಸಿ ಕಸ ಸಂಗ್ರಹಣ ವಾಹನಕ್ಕೆ ನೀಡಬೇಕು.

ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಬೇಕು. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬಾರದು. ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆಗೆ ಸಂಬಂದ ಪಟ್ಟ ಪ್ರಾಧಿಕಾರಗಳಿಂದ ಅನುಮತಿ ಪಡೆಯಬೇಕು. ಶಬ್ದ ಮಾಲಿನ್ಯ ನಿಬರ್ಂಧ ಮತ್ತು ನಿಯಂತ್ರಣ ನಿಯಮ-2008 ಅನುಸಾರ ಗಣೇಶ ಪ್ರತಿಷ್ಠಾಪನೆ ಸ್ಥಳದಲ್ಲಿ ಧ್ವನಿವರ್ಧಕ ಹಾಗೂ ಪೆಂಡಾಲುಗಳಲ್ಲಿ ನಿಗದಿತ ಡೆಸಿಬಲ್‍ಗಿಂತ ಅಧಿಕ ಹಾಗೂ ಕರ್ಕಶ ಶಬ್ದ ಉಂಟುಮಾಡುವ ಉಪಕರಣಗಳನ್ನು ಬಳಸಬಾರದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 06 ಗಂಟೆಯವರೆಗೆ ಹಾಗೂ ಧ್ವನಿವರ್ಧಕಗಳ ಬಳಕೆಯನ್ನು ಸಂರ್ಪೂಣವಾಗಿ ನಿಷೇಧಿಸಲಾಗಿದೆ.

ನಿಯಮಗಳನ್ನು ಉಲ್ಲಂಘಿಸಿ ಪಿ.ಓ.ಪಿ ಮತ್ತು ರಾಸಾಯನಿಕ ಬಣ್ಣ ಲೇಪಿತವಾದ ವಿಗ್ರಹಗಳನ್ನು ಪ್ರತಿಷ್ಠಾಪಿಸಿ ಜಲ ಮೂಲಗಳಲ್ಲಿ ವಿಸರ್ಜಿಸುವುದು, ಶಬ್ದ ಮಾಲಿನ್ಯ ಉಂಟುಮಾಡಿದರೆ ಕಾನೂನು ರೀತ್ಯಾ ಕ್ರಮ ತೆಗೆದುಕೊಳ್ಳಲಾಗುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment